tamanvi
ಅಪರಾಧ

ಉಪ್ಪಿನಂಗಡಿ : ಕೆಎಸ್ ಆ‌ರ್ ಟಿಸಿ ಬಸ್ -ಲಾರಿ ಡಿಕ್ಕಿ, ಶಾಲಾ ಮಕ್ಕಳ ಸಹಿತ ಹಲವರಿಗೆ ಗಾಯ

ಈ ಸುದ್ದಿಯನ್ನು ಶೇರ್ ಮಾಡಿ

ನೆಲ್ಯಾಡಿ : ಕೆಎಸ್ ಆರ್ ಟಿಸಿ ಬಸ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿ ಶಾಲಾ ಮಕ್ಕಳ ಸಹಿತ 10 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಉಪ್ಪಿನಂಗಡಿಯಲ್ಲಿ ಇಂದು (ಮಾ.13) ಬೆಳಿಗ್ಗೆ ನಡೆದಿದೆ.

ಸುಬ್ರಹ್ಮಣ್ಯದಿಂದ ಮಂಗಳೂರಿಗೆ ಹೋಗುತ್ತಿದ್ದ ಬಸ್ ಉಪ್ಪಿನಂಗಡಿಯಲ್ಲಿ ಬಸ್ ನಿಲ್ದಾಣಕ್ಕೆ ಹೋಗಲು ರಾಷ್ಟ್ರೀಯ ಹೆದ್ದಾರಿಯಿಂದ ಅಂಡರ್ ಪಾಸ್ ನಿಂದ ಮುಂದೆ ಹೋಗುತ್ತಿದ್ದಂತೆ ಮಂಗಳೂರು ಕಡೆಯಿಂದ ಬರುತ್ತಿದ್ದ ಲಾರಿ ಬಸ್ ನ ಹಿಂಬದಿಗೆ ಡಿಕ್ಕಿಯಾಗಿದೆ.

ಘಟನೆಯಲ್ಲಿ ಶಾಲಾ ಮಕ್ಕಳ ಸಹಿತ ಬಸ್ ನ ಹಿಂಬದಿ ಸೀಟು ಹಾಗೂ ಬಾಗಿಲಲ್ಲಿ ನಿಂತುಕೊಂಡಿದ್ದ ಹಲವರು ಗಾಯಗೊಂಡಿದ್ದಾರೆ. ಈ ಪೈಕಿ ಕೆಲವರು ಉಪ್ಪಿನಂಗಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಗಂಭೀರ ಗಾಯಗೊಂಡವರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮನೆಗೆ ಬಿಡುವುದಾಗಿ ಬೈಕ್‌ನಲ್ಲಿ ಕರೆತಂದು ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೋ ಪ್ರಕರಣ ದಾಖಲು

ಮಂಗಳೂರು: ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅಪ್ರಾಪ್ತ ಬಾಲಕಿಯನ್ನು ಮನೆಗೆ ಬಿಡುವುದಾಗಿ…

1 of 119