ವಸತಿ ಶಾಲೆಯಿಂದ ಇಬ್ಬರು 9ನೇ ತರಗತಿಯ ವಿದ್ಯಾರ್ಥಿಗಳು ತರುಣ್ ಮತ್ತು ಯಶ್ಚಿತ್ ಸಾಲಿಯಾನ್ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ಚಿಕ್ಕಮಗಳೂರು ತೇಗೂರು ಗ್ರಾಮದಲ್ಲಿರುವ ವಸತಿ ಶಾಲೆಯಿಂದ ಇಬ್ಬರು 9ನೇ ತರಗತಿಯ ನಾಪತ್ತೆಯಾದ ವಿದ್ಯಾರ್ಥಿಗಳು ಕಳೆದ 10 ದಿನಗಳ ಹಿಂದೆ ಮಧ್ಯರಾತ್ರಿ ಶಾಲೆಯಿಂದ ಕಾಣೆಯಾಗಿದ್ದಾರೆ. ಅವರು ಮನೆಗೂ ತೆರಳಿಲ್ಲ, ಅವರು ಎಲ್ಲಿದ್ದಾರೆ ಎಂಬ ಬಗ್ಗೆ ಯಾವುದೇ ಮಾಹಿತಿ ದೊರೆತಿಲ್ಲ. ಈ ಹಿಂದೆಯೂ ಈ ‘ಇಬ್ಬರು ಮಕ್ಕಳು ವಸತಿ ಶಾಲೆಯಲ್ಲಿ ಇರಲು ಹಿಂದೇಟು ಹಾಕಿ ಓಡಿ ಹೋಗಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಶಾಲಾ ಆಡಳಿತ ಮಂಡಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.ಪೊಲೀಸ್ ತನಿಖೆ ಮುಂದುವರಿಯುತ್ತಿದೆ