ವಿಟ್ಲ: ಕಾರೊಂದು ಆಟೋ ರಿಕ್ಷಾದ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಗಂಭೀರ ಗಾಯಗೊಂಡ ಘಟನೆ ಮಾಣಿ ಬಳಿಯ ಸೂರಿಕುಮೇರಲ್ಲಿ ನಡೆದಿದೆ.
ಕಲ್ಲಡ್ಕ ಬಳಿಯ ಆಟೋ ರಿಕ್ಷಾ ಸೂರಿಕುಮೇರು ಜಂಕ್ಷನ್ ಬಳಿ ತೆರಳುತ್ತಿದ್ದ ವೇಳೆ ಹಿಂಭಾಗದಿಂದ ಬಂದ ಕಾರು ಡಿಕ್ಕಿಯಾಗಿದೆ. ಘಟನೆಯಿಂದಾಗಿ ಆಟೋರಿಕ್ಷಾ ಚಾಲಕ ಗಂಭೀರ ಗಾಯಗೊಂಡಿದ್ದು, ಕೂಡಲೇ ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಪರಿಣಾಮ ಆಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಮಾಹಿತಿ ಸಂಗ್ರಹಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿ ಇನ್ನಷ್ಟೆ ಲಭಿಸಬೇಕಿದೆ.