Gl jewellers
ಅಪರಾಧ

ಉಪ ಸಭಾಪತಿ ರುದ್ರಪ್ಪ ಲಮಾಣಿಗೆ ಬೈಕ್‌ ಢಿಕ್ಕಿ

ಬೈಕ್‌ ಢಿಕ್ಕಿಯಾಗಿ ಉಪ ಸಭಾಪತಿ ರುದ್ರಪ್ಪ ಲಮಾಣಿ ಅವರು ಗಾಯಗೊಂಡಿರುವ ಘಟನೆ ಹಿರಿಯೂರು ತಾಲೂಕಿನ ಜೆಜೆ ಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಚಿತ್ರದುರ್ಗ: ಬೈಕ್‌ ಢಿಕ್ಕಿಯಾಗಿ ಉಪ ಸಭಾಪತಿ ರುದ್ರಪ್ಪ ಲಮಾಣಿ ಅವರು ಗಾಯಗೊಂಡಿರುವ ಘಟನೆ ಹಿರಿಯೂರು ತಾಲೂಕಿನ ಜೆಜೆ ಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ನಡೆದಿದೆ.

ಜೆಜೆ ಹಳ್ಳಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಎಳನೀರು ಕುಡಿಯಲು ಉಪ ಸಭಾಪತಿ ಅವರ ಕಾರು ನಿಲ್ಲಿಸಲಾಗಿತ್ತು. ಈ ವೇಳೆ ಬೈಕ್ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ರಭಸಕ್ಕೆ ಉಪಸಭಾಪತಿ ಲಾಮಾಣಿ ಅವರಿಗೆ ಗಾಯಗಳಾಗಿವೆ.

ಸ್ಥಳಕ್ಕೆ ಗ್ರಾಮಾಂತರ ಪೊಲೀಸ್ ಪಿಐ ಶಿವಕುಮಾ‌ರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹೆಚ್ಚಿನ ಚಿಕಿತ್ಸೆ ಗಾಗಿ ರುದ್ರಪ್ಪ ಲಮಾಣಿ ಅವರನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts