ಬಂಟ್ವಾಳ: ಕಳೆದ ವಾರ ಬಿ.ಸಿ.ರೋಡಿನಲ್ಲಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬಿ.ಸಿ.ರೋಡಿನ ಯುವ ನ್ಯಾಯವಾದಿ ಪ್ರಥಮ್ ಬಂಗೇರ (27) ಸೋಮವಾರ ಚಿಕಿತ್ಸೆಗೆ ಸ್ಪಂದಿಸದೇ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಪ್ರಥಮ್ ಅವರ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಅವರ ಕುಟುಂಬ ಮಾನವೀಯತೆ ಮೆರೆದಿದೆ.
ಮೃತರ ಎರಡು ಕಣ್ಣು, ಕಿಡ್ನಿ, ಲಿವರ್ ಮತ್ತು ಕರುಳಿನ ಭಾಗವನ್ನು ದಾನವಾಗಿ ನೀಡಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ.