ಅಪರಾಧ

ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ ಜೆಸಿಬಿ! ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತ್ಯು!! 

GL
ರಸ್ತೆ ಕಾಮಗಾರಿ ವೇಳೆ ವಿದ್ಯುತ್‌ ಕಂಬಕ್ಕೆ ಜೆಸಿಬಿ ಡಿಕ್ಕಿಯಾಗಿ ವಿದ್ಯುತ್ ಕಂಬ ತುಂಡಾಗಿ ಬಿದ್ದ ಪರಿಣಾಮ ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೈಯ್ಯಪ್ಪನಹಳ್ಳಿ ಬಳಿಯ ಸದ್ದುಗುಂಟೆಪಾಳ್ಯದಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ರಸ್ತೆ ಕಾಮಗಾರಿ ವೇಳೆ ವಿದ್ಯುತ್‌ ಕಂಬಕ್ಕೆ ಜೆಸಿಬಿ ಡಿಕ್ಕಿಯಾಗಿ ವಿದ್ಯುತ್ ಕಂಬ ತುಂಡಾಗಿ ಬಿದ್ದ ಪರಿಣಾಮ ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೈಯ್ಯಪ್ಪನಹಳ್ಳಿ ಬಳಿಯ ಸದ್ದುಗುಂಟೆಪಾಳ್ಯದಲ್ಲಿ ನಡೆದಿದೆ.

chennai-shopping
maithri

ಮೃತಪಟ್ಟ ಮಹಿಳೆಯರನ್ನು ಸದ್ದುಗುಂಟೆಪಾಳ್ಯ ನಿವಾಸಿಗಳಾದ ಸುಮತಿ(35) ಮತ್ತು ಸೋನಿ ಕುಮಾರಿ (35) ಎಂದು ಗುರುತಿಸಲಾಗಿದೆ.

ಸದ್ದುಗುಂಟೆಪಾಳ್ಯ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದೆ.

ಮಕ್ಕಳನ್ನು ಟ್ಯೂಷನ್ಗೆ ಕರೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರ ಮೇಲೆ ವಿದ್ಯುತ್ ಕಂಬ ಮುರಿದು ಬಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದರು. ಜೆಸಿಬಿಯನ್ನು ಜಪ್ತಿ ಮಾಡಿ, ಜೆಸಿಬಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

ಬೈಯ್ಯಪ್ಪನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 105