pashupathi
ಅಪರಾಧ

ಸುಳ್ಯ: ರೇಬಿಸ್ ದೃಢ, ಮಹಿಳೆ ಸಾವು!!

tv clinic
ಹೊಟ್ಟೆನೋವು ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಸುಳ್ಯದ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಂದಿದ್ದರು. ಈ ವೇಳೆ ನೀರನ್ನು ನೋಡಿ ಬೊಬ್ಬೆ ಹಾಕುವುದು ಸಹಿತ ವಿಚಿತ್ರ ವರ್ತನೆ ತೋರುತ್ತಿದ್ದ ಆಕೆಯೊಂದಿಗೆ ವೈದ್ಯರು ಪೂರಕ ಮಾಹಿತಿ ಕೇಳಿದಾಗ ನಾಯಿ ಕಚ್ಚಿದ್ದ ಬಗ್ಗೆ ತಿಳಿಸಿದ್ದರು.

ಈ ಸುದ್ದಿಯನ್ನು ಶೇರ್ ಮಾಡಿ

ಸುಳ್ಯ: ತಿಂಗಳ ಹಿಂದೆ ನಾಯಿ ಕಡಿತಕ್ಕೆ ಒಳಗಾಗಿದ್ದ ಮಹಿಳೆ ಮೃತಪಟ್ಟ ಘಟನೆ ಸುಳ್ಯದ ಸಂಪಾಜೆಯಲ್ಲಿ ಸಂಭವಿಸಿದೆ. ಸಂಪಾಜೆಯ ಕಲ್ಲುಗುಂಡಿ ಸಮೀಪದ 42 ವರ್ಷ ಪ್ರಾಯದ ಮಹಿಳೆ ಫೆ.7ರಂದು ಅರಂತೋಡಿನಲ್ಲಿ ತೋಟದ ಕೆಲಸಕ್ಕೆ ತೆರಳಿದ್ದಾಗ ಅವರಿಗೆ ನಾಯಿಮರಿಯೊಂದು ಕಚ್ಚಿತ್ತು.

akshaya college

ಆದರೆ ಮಹಿಳೆ ಈ ಬಗ್ಗೆ ಯಾರಿಗೂ ತಿಳಿಸಿರಲಿಲ್ಲ ಹಾಗೂ ಚಿಕಿತ್ಸೆಯನ್ನೂ ಪಡೆದಿರಲಿಲ್ಲ ಎನ್ನಲಾಗಿದೆ. ಸೋಮವಾರ ಆಕೆಗೆ ಹೊಟ್ಟೆನೋವು ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಸುಳ್ಯದ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಂದಿದ್ದರು. ಈ ವೇಳೆ ನೀರನ್ನು ನೋಡಿ ಬೊಬ್ಬೆ ಹಾಕುವುದು ಸಹಿತ ವಿಚಿತ್ರ ವರ್ತನೆ ತೋರುತ್ತಿದ್ದ ಆಕೆಯೊಂದಿಗೆ ವೈದ್ಯರು ಪೂರಕ ಮಾಹಿತಿ ಕೇಳಿದಾಗ ನಾಯಿ ಕಚ್ಚಿದ್ದ ಬಗ್ಗೆ ತಿಳಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನಾÉಕ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮಾ.20ರಂದು ಮೃತಪಟ್ಟರು.

ರೇಬಿಸ್ ದೃಢ: ಆಕೆ ರೇಬಿಸ್ ಕಾಯಿಲೆಗೆ ತುತ್ತಾಗಿರುವುದು

ವೈದ್ಯಕೀಯ ವರದಿಯಲ್ಲಿ ದೃಢಪಟ್ಟಿದೆ. ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಪರಿಸರದ ಹಲವರಿಗೆ ಹಾಗೂ ಮನೆಯವರಿಗೆ ಎಆರ್‌ವಿ ಲಸಿಕೆ ನೀಡಲಾಗಿದೆ ಎಂದು ತಾಲೂಕು ವೈದ್ಯಾಧಿಕಾರಿ ಡಾ| ನಂದಕುಮಾರ್ ತಿಳಿಸಿದ್ದಾರೆ. ಮೃತ ಮಹಿಳೆ ಪತಿ, ಇಬ್ಬರು ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಇತರರಿಗೂ ಕಚ್ಚಿರುವ ಶಂಕೆ!

ಮಹಿಳೆಗೆ ಕಚ್ಚಿರುವ ನಾಯಿಮರಿ ಅರಂತೋಡಿನಲ್ಲಿ ಇನ್ನೂ ಕೆಲವರಿಗೆ ಕಚ್ಚಿದೆ ಎನ್ನಲಾಗಿದೆ. ಆದರೆ ಪ್ರಸ್ತುತ ಎಲ್ಲಿ ಹೋಗಿದೆ ಎಂಬ ಬಗ್ಗೆ ಸ್ಪಷ್ಟತೆ ಇಲ್ಲ. ನಾಯಿ ಕಡಿತಕ್ಕೊಳಗಾದವರು ಸೂಕ್ತ ಲಸಿಕೆ ಪಡೆದುಕೊಳ್ಳುವಂತೆ ತಾಲೂಕು ವೈದ್ಯಾ ಧಿಕಾರಿಗಳು ವಿನಂತಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts