pashupathi
ಅಪರಾಧ

ಕೇರಳಕ್ಕೆ ಅಕ್ರಮ ಮರ ಸಾಗಾಟ: ವಾಹನ ವಶಕ್ಕೆ

tv clinic
ಯಾವುದೇ ಅನುಮತಿ ಇಲ್ಲದೆ ಅಕ್ರಮವಾಗಿ ವಿವಿಧ ಬಗೆಯ ಮರದ ದಿಮ್ಮಿಗಳನ್ನು ಪಿಕ್ ಅಪ್ ವಾಹನದಲ್ಲಿ ಸಾಗಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯಂತೆ ಮಂಗಳೂರು ಅರಣ್ಯ ಸಂಚಾರಿ ದಳದ ಅಧಿಕಾರಿ ಮಾ.22ರ ಶನಿವಾರ ಬಂಟ್ವಾಳದ ಕಡಂಬು ಎಂಬಲ್ಲಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ವಿಟ್ಲ: ಯಾವುದೇ ಅನುಮತಿ ಇಲ್ಲದೆ ಅಕ್ರಮವಾಗಿ ವಿವಿಧ ಬಗೆಯ ಮರದ ದಿಮ್ಮಿಗಳನ್ನು ಪಿಕ್ ಅಪ್ ವಾಹನದಲ್ಲಿ ಸಾಗಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯಂತೆ ಮಂಗಳೂರು ಅರಣ್ಯ ಸಂಚಾರಿ ದಳದ ಅಧಿಕಾರಿ ಮಾ.22ರ ಶನಿವಾರ ಬಂಟ್ವಾಳದ ಕಡಂಬು ಎಂಬಲ್ಲಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ.

akshaya college

ಆರೋಪಿ ವಾಹನ ಚಾಲಕ ಅನ್ವರ್ ಸಾದತ್ ಅಮೂರು ಅವರ ಮೇಲೆ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ.

ಬಂಟ್ವಾಳ ತಾಲೂಕು ವಿಟ್ಲಪಡೂರು ಗ್ರಾಮದ ಕಡಂಬು ಎಂಬಲ್ಲಿ ಪುತ್ತೂರು ಕಡೆಯಿಂದ ಮರದ ದಿಮ್ಮಿಗಳನ್ನು ತುಂಬಿಸಿಕೊಂಡು ಕೇರಳಕ್ಕೆ ಸಾಗಾಟ ಮಾಡುವ ವೇಳೆ ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಪತ್ತೆ ಹಚ್ಚಿ ಕೇಸು ದಾಖಲಿಸಿಕೊಂಡಿದ್ದಾರೆ. ಸೊತ್ತು ಮತ್ತು ವಾಹನದ ಒಟ್ಟು ಮೌಲ್ಯ 3.50 ಲಕ್ಷ ಎಂದು ಅಂದಾಜಿಸಲಾಗಿದೆ.

ಮಂಗಳೂರು ಅರಣ್ಯ ಸಂಚಾರಿ ದಳದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಕಾಂತ್ ಖಣದಾಳೆ ನೇತೃತ್ವದಲ್ಲಿ ಪ್ರಭಾರ ವಲಯ ಅರಣ್ಯಾಧಿಕಾರಿ ಪ್ರಶಾಂತ ಪೂಜಾರಿ, ಉಪ ವಲಯ ಅರಣ್ಯಾಧಿಕಾರಿ ವಿನಯ ಕುಮಾ‌ರ್, ಶಿವಾನಂದ ಮಾಧರ, ವಾಹನ ಚಾಲಕ ಜಯಪ್ರಕಾಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts