ಅಪರಾಧ

ಇಟ್ಟಿಗೆಗೆ ಪಾಲಿಶ್ ಮಾಡಿ ನಕಲಿ ಚಿನ್ನ ಮಾರಾಟ!!

ಇಟ್ಟಿಗೆ ಹಾಗೂ ಮರದ ತುಂಡಿಗೆ ಚಿನ್ನದ ಪಾಲಿಶ್ ಮಾಡಿ ಮಾರಾಟ ಮಾಡಲು ಯತ್ನಿಸಿದ ಬಿಹಾರ ಮೂಲದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಇಟ್ಟಿಗೆ ಹಾಗೂ ಮರದ ತುಂಡಿಗೆ ಚಿನ್ನದ ಪಾಲಿಶ್ ಮಾಡಿ ಮಾರಾಟ ಮಾಡಲು ಯತ್ನಿಸಿದ ಬಿಹಾರ ಮೂಲದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

akshaya college

ಬಂಧಿತರನ್ನು ರಬಿಕುಲ್ ಇಸ್ಲಾಂ, ಇದ್ದಿಶ್ ಅಲಿ, ಅನ್ವ‌ರ್ ಹುಸೇನ್ ಎಂದು ಗುರುತಿಸಲಾಗಿದೆ.

ಮನೆ ಪಾಯ ಹಾಕುವಾಗ ಚಿನ್ನದ ನಿಧಿ ಸಿಕ್ಕಿದೆ ಎಂದು ಆರೋಪಿಗಳು ಕಥೆ ಕಟ್ಟಿದ್ದರು. ಅಲ್ಲದೆ. ಮಾರುಕಟ್ಟೆಯಲ್ಲಿನ ಚಿನ್ನದ ಬೆಲೆಗಿಂತ ಅರ್ಧ ಬೆಲೆಗೆ ಚಿನ್ನ ಕೊಡುತ್ತೇವೆ ಎಂದು ಹೇಳುತ್ತಿದ್ದರು. ಮರದ ಹಲಗೆ ಹಾಗೂ ಇಟ್ಟಿಗೆಗೆ ಚಿನ್ನ ಪಾಲಿಶ್ ಮಾಡಿ ವಂಚಿಸುತ್ತಿದ್ದರು.

ನಂಬಿಕೆ ಬರುವಂತೆ ಮಾಡಲು ಆರೋಪಿಗಳು ಮೊದಲಿಗೆ ಒಂದೆರಡು ಗ್ರಾಂ ಅಸಲಿ ಚಿನ್ನ ನೀಡುತ್ತಿದ್ದರು. ಒಮ್ಮೆ ಜನ ನಂಬಿದ ನಂತರ ನಕಲಿ ಚಿನ್ನ ಮಾರಾಟ ಮಾಡಲು ಯತ್ನಿಸಿದ್ದರು. ಚಿನ್ನ ತೆಗೆದುಕೊಳ್ಳಲು ತಾವು ತಿಳಿಸಿದ ಜಾಗಕ್ಕೆ ಬರುವಂತೆ ಹೇಳಿ ಪದೆ ಪದೇ ಲೊಕೇಷನ್ ಬದಲಿಸುತ್ತಿದ್ದರು. ಈ ಬಗ್ಗೆ ಸಿಸಿಬಿ ಪೊಲೀಸರಿಗೆ ಖಚಿತ ಮಾಹಿತಿ ದೊರೆತಿತ್ತು.

ಇದರ ಆಧಾರದಲ್ಲಿ ಕೋರಮಂಗಲದಲ್ಲಿ ದಾಳಿ ನಡೆಸಿ ಮೂವರನ್ನು ಬಂಧಿಸಿದ್ದಾರೆ. ಬಂಧಿತರಿಂದ 970 ಗ್ರಾಂ ನಕಲಿ ಚಿನ್ನ, ಒಂದು ವಾಹನ, ಮೂರು ಮೊಬೈಲ್ ವಶಕ್ಕೆ ಪಡೆಯಲಾಗಿದೆ. ಸದ್ಯ ಬಂಧಿತರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts