Gl
ಅಪರಾಧ

ಪೊನ್ನಂಪೇಟೆಯಲ್ಲಿ ಕತ್ತಿಯಿಂದ ಕೊಚ್ಚಿ ನಾಲ್ವರ ಹತ್ಯೆ..!

GL
ವ್ಯಕ್ತಿಯೊಬ್ಬ ತನ್ನ ಪತ್ನಿ, ಪುತ್ರಿ, ಅತ್ತೆ ಹಾಗೂ ಮಾವನನ್ನು ಭೀಕರವಾಗಿ  ಕತ್ತಿಯಿಂದ ಕೊಚ್ಚಿ ನಾಲ್ವರ ಹತ್ಯೆ ಮಾಡಿದ ಘಟನೆ ಇಂದು(ಮಾ.28) ನಡೆದಿದೆ. ಆರೋಪಿ ತಲೆ ಮರೆಸಿಕೊಂಡಿರುವ ಘಟನೆ ಶುಕ್ರವಾರ (ಮಾ.28) ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಬೇಗೂರು ಗ್ರಾಮದಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಡಿಕೇರಿ: ವ್ಯಕ್ತಿಯೊಬ್ಬ ತನ್ನ ಪತ್ನಿ, ಪುತ್ರಿ, ಅತ್ತೆ ಹಾಗೂ ಮಾವನನ್ನು ಭೀಕರವಾಗಿ  ಕತ್ತಿಯಿಂದ ಕೊಚ್ಚಿ ನಾಲ್ವರ ಹತ್ಯೆ ಮಾಡಿದ ಘಟನೆ ಇಂದು(ಮಾ.28) ನಡೆದಿದೆ. ಆರೋಪಿ ತಲೆ ಮರೆಸಿಕೊಂಡಿರುವ ಘಟನೆ ಶುಕ್ರವಾರ (ಮಾ.28) ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಬೇಗೂರು ಗ್ರಾಮದಲ್ಲಿ ನಡೆದಿದೆ.

core technologies

ಕೇರಳ ಮೂಲದ ಗಿರೀಶ್(35) ಎಂಬಾತ ಕೊಲೆ ಆರೋಪಿಯಾಗಿದ್ದು, ಘಟನೆ ಬಳಿಕ ತಲೆ ಮರೆಸಿಕೊಂಡಿದ್ದಾನೆ. ಈತನ ಮಾವ ಜೇನು ಕುರುಬರ ಕರಿಯ(75), ಅತ್ತೆ ಗೌರಿ(70), ಪತ್ನಿ ನಾಗಿ(30) ಹಾಗೂ ಪುತ್ರಿ ಕಾವೇರಿ(5) ಹತ್ಯೆಗೀಡಾದವರಾಗಿದ್ದಾರೆ.

ಏಳು ವರ್ಷಗಳ ಹಿಂದೆ ಗಿರೀಶ್ ಹಾಗೂ ನಾಗಿ ವಿವಾಹವಾಗಿದ್ದು, ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕಾರ್ಮಿಕರಾಗಿರುವ ದಂಪತಿ ಹಾಗೂ ಪುತ್ರಿ ಇತ್ತೀಚೆಗೆ ಬೇಗೂರಿನ ಮಾವನ ಮನೆಗೆ ಬಂದು ವಾಸವಿದ್ದರು ಎಂದು ಹೇಳಲಾಗಿದೆ.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್‌ ಹಾಗೂ ಪೊನ್ನಂಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಪಿ ಗಿರೀಶ್ ಪತ್ತೆಗೆ ಕಾರ್ಯಾಚರಣೆ ಕೈಗೊಂಡಿದ್ದಾರೆ


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts