ಅಪರಾಧ

ಬಿಜೆಪಿ ಕಚೇರಿಯಲ್ಲೇ ನೇಣಿಗೆ ಶರಣಾದ ಕಾರ್ಯಕರ್ತ!

GL
ಬಿಜೆಪಿ ಕಾರ್ಯಕರ್ತರೊಬ್ಬರು ಕಚೇರಿಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ನಾಗವಾರದಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಡಿಕೇರಿಯ ಬಿಜೆಪಿ ಕಾರ್ಯಕರ್ತರೊಬ್ಬರು ಕಚೇರಿಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ನಾಗವಾರದಲ್ಲಿ ನಡೆದಿದೆ.

chennai-shopping
maithri

ವಿನಯ್ ಸೋಮಯ್ಯ (35) ಆತ್ಮಹತ್ಯೆ ಮಾಡಿಕೊಂಡ ಕಾರ್ಯಕರ್ತ ಎಂದು ಗುರುತಿಸಲಾಗಿದೆ. ತನ್ನ ವಿರುದ್ಧ ಎಫ್ ಐಆ‌ರ್ ದಾಖಲಾಗಿದ್ದಕ್ಕೆ ಮನನೊಂದು ನಾಗವಾರದ ಕಚೇರಿಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಸಾವಿಗೂ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ಡೆತ್ ನೋಟ್ ಪೋಸ್ಟ್ ಮಾಡಿದ್ದಾರೆ. ರಾಜಕೀಯ ಪ್ರೇರಿತ ಎಫ್ ಐಆರ್ ನಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ.

ಈ ಹಿಂದೆ ವಿನಯ್ ಸೋಮಯ್ಯ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ ಎಸ್ ಪೊನ್ನಣ್ಣ ಬಗ್ಗೆ ಅಪಹಾಸ್ಯ ಮಾಡಿ ವಾಟ್ಸಪ್ ಪೋಸ್ಟ್ ಮಾಡಿದ್ದರು.

ಈ ಪೋಸ್ಟ್ ವಿರುದ್ಧ ಕಾಂಗ್ರೆಸ್ ಮುಖಂಡ ತನ್ನೀರ ಮೈನಾ ಮಡಿಕೇರಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ವಿನಯ್ ಸೋಮಯ್ಯ ಅವರನ್ನು ಪೊಲೀಸರು ಎರಡು ತಿಂಗಳ ಹಿಂದೆ ಬಂಧಿಸಿದ್ದರು. ಬಂಧನದ ಬಳಿಕ ಬಹಳ ಮನನೊಂದಿದ್ದ ವಿನಯ್ ಇಂದು ಮುಂಜಾನೆ 4:30ರ ವೇಳೆಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದಕ್ಕೆ ಸಂಬಂಧ ಪಟ್ಟ ಹಾಗೆ ವಿನಯ್ ಅವರು ಡೆತ್ ನೋಟ್ ನಲ್ಲಿ ಎಲ್ಲಾ ವಿವರಗಳನ್ನು ಬರೆದುಕೊಂಡಿದ್ದಾರೆ. ಬಿಜೆಪಿ ಕಾರ್ಯಕರ್ತನ ಆತ್ಮಹತ್ಯೆ ಪ್ರಕರಣದ ಮಾಹಿತಿಯನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪಡೆದಿದ್ದಾರೆ ಎನ್ನಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 105