pashupathi
ಅಪರಾಧ

ನಕಲಿ ವೈದ್ಯನಿಂದ ಹೃದಯ  ಶಸ್ತ್ರಚಿಕಿತ್ಸೆ; 7 ಮಂದಿ ದುರ್ಮರಣ!!

tv clinic
ಆಸ್ಪತ್ರೆಯೊಂದರಲ್ಲಿ ನಕಲಿ ವೈದ್ಯನೊಬ್ಬ ಸುಮಾರು 7 ಜನರಿಗೆ ಹೃದಯ ಶಸ್ತ್ರಚಿಕಿತ್ಸೆ ಮಾಡಿದ್ದು, ರೋಗಿಗಳ ಸಾವಿಗೆ ಕಾರಣನಾಗಿದ್ದಾನೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಧ್ಯಪ್ರದೇಶದ ಆಸ್ಪತ್ರೆಯೊಂದರಲ್ಲಿ ನಕಲಿ ವೈದ್ಯನೊಬ್ಬ ಸುಮಾರು 7 ಜನರಿಗೆ ಹೃದಯ ಶಸ್ತ್ರಚಿಕಿತ್ಸೆ ಮಾಡಿದ್ದು, ರೋಗಿಗಳ ಸಾವಿಗೆ ಕಾರಣನಾಗಿದ್ದಾನೆ.

akshaya college

ದಾಮೋಹ್ ನಗರದ ಖಾಸಗಿ ಮಿಷನರಿ ಆಸ್ಪತ್ರೆಯಲ್ಲಿ ಒಂದು ತಿಂಗಳೊಳಗೆ 7 ಜನರ ಸಾವುಗಳ ವರದಿಯಾಗಿತ್ತು. ಈ ಸಂಬಂಧ ವೈದ್ಯನನ್ನು ಅಧಿಕಾರಿಗಳು ವಿಚಾರಿಸಿದಾಗ ಆತ ನಕಲಿ ವೈದ್ಯ ಎಂದು ತಿಳಿದು ಬಂದಿದೆ.

ಎನ್ ಜಾನ್ ಕೆಮ್ ಎಂಬ ವ್ಯಕ್ತಿ ಕ್ರಿಶ್ಚಿಯನ್ ಮಿಷನರಿ ಆಸ್ಪತ್ರೆಯಲ್ಲಿ ಬ್ರಿಟಿಷ್ ವೈದ್ಯನಂತೆ ನಟಿಸಿ ಕೆಲಸ ಮಾಡುತ್ತಿದ್ದ. ಹೆಚ್ಚಿನ ತನಿಖೆಯ ನಂತರ, ಆರೋಪಿಯ ನಿಜವಾದ ಹೆಸರು ನರೇಂದ್ರ ವಿಕ್ರಮಾದಿತ್ಯ ಯಾದವ್ ಎಂದು ತಿಳಿದುಬಂದಿದೆ.

ಈ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಮಕ್ಕಳ ಕಲ್ಯಾಣ ಸಮಿತಿಯ ಜಿಲ್ಲಾ ಅಧ್ಯಕ್ಷ ಮತ್ತು ವಕೀಲ ದೀಪಕ್ ತಿವಾರಿ, ಅಧಿಕೃತ ಸಾವಿನ ಸಂಖ್ಯೆ 7 ಆಗಿದ್ದರೂ, ನಿಜವಾದ ಸಂಖ್ಯೆ ಇನ್ನೂ ಹೆಚ್ಚಾಗಿದೆ ಎಂದು ಆರೋಪಿಸಿದ್ದಾರೆ. ಈ ವೈದ್ಯನ ವಿರುದ್ಧ ನಾನು ಈ ಹಿಂದೆ ದಾಮೋಹ್ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ದೂರು ನೀಡಿದ್ದೆ ಎಂದು ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts