ಅಪರಾಧ

ನಂಬರ್ ಪ್ಲೇಟ್ ಮರೆಮಾಚಿ ಹೆಲ್ಮೆಟ್ ಧರಿಸದೆ ಚಾಲನೆ; ಆರೋಪಿ ಬಲೆಗೆ!!

tv clinic
ಸ್ಕೂಟರ್ ಸವಾರನೊಬ್ಬ ಸ್ಕೂಟರ್‌ನ ಹಿಂಬದಿಯ ನಂಬ‌ರ್ ಪ್ಲೇಟನ್ನು ಪ್ಲಾಸ್ಟಿಕ್ ಕವರ್‌ನಿಂದ ಮರೆಮಾಚಿ, ಹೆಲ್ಮಟ್ ಧರಿಸದೆ ಪೊಲೀಸರ ಕಣ್ಣು ತಪ್ಪಿಸಿ ಸ್ಕೂಟರ್‌ನ್ನು ಚಲಾಯಿಸಿ ಇದೀಗ ದಂಡ ಪಾವತಿಸುವಂತಾಗಿದೆ

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು : ಸ್ಕೂಟರ್ ಸವಾರನೊಬ್ಬ ಸ್ಕೂಟರ್‌ನ ಹಿಂಬದಿಯ ನಂಬ‌ರ್ ಪ್ಲೇಟನ್ನು ಪ್ಲಾಸ್ಟಿಕ್ ಕವರ್‌ನಿಂದ ಮರೆಮಾಚಿ, ಹೆಲ್ಮಟ್ ಧರಿಸದೆ ಪೊಲೀಸರ ಕಣ್ಣು ತಪ್ಪಿಸಿ ಸ್ಕೂಟರ್‌ನ್ನು ಚಲಾಯಿಸಿ ಇದೀಗ ದಂಡ ಪಾವತಿಸುವಂತಾಗಿದೆ.

core technologies

ಮಾ.23ರಂದು ಸಂಜೆ 4 ಗಂಟೆಯಿಂದ 4:10ರ ಸಮಯಕ್ಕೆ ಬೆಂದೂರ್‌ವೆಲ್‌, ಕಂಕನಾಡಿ, ಪಂಪ್‌ವೆಲ್ ರಸ್ತೆಯಲ್ಲಿ ಸ್ಕೂಟ‌ರ್ ಸವಾರನೊಬ್ಬ ಸ್ಕೂಟರ್‌ನ ಹಿಂಬದಿಯ ನಂಬರ್ ಪ್ಲೇಟನ್ನು ಪ್ಲಾಸ್ಟಿಕ್ ಕವರ್‌ನಿಂದ ಮುಚ್ಚಿ ಹೆಲ್ಮಟ್ ಧರಿಸದೆ ತೊಕ್ಕೊಟ್ಟು ಕಡೆಗೆ ಚಲಾಯಿಸಿಕೊಂಡು ಹೋಗುತ್ತಿರುವ ವಿಡಿಯೋವನ್ನು ಸಾರ್ವಜನಿಕರೊಬ್ಬರು ಸೆರೆ ಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದರು.

akshaya college

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ನಗರದ ಸಂಚಾರ ಪೊಲೀಸರು ಕಾರ್ಯಪ್ರವೃತ್ತರಾಗಿ ಸ್ಕೂಟರ್ ಹಾಗೂ ಸ್ಕೂಟರ್ ಸವಾರನ ಪತ್ತೆ ಹಚ್ಚಿದ್ದಾರೆ. ಸಂಚಾರ ನಿಯಮವನ್ನು ಉಲ್ಲಂಘಿಸಿರುವ ಕೆಎ-19-ಎಚ್‌ಟಿ-1944 ಸ್ಕೂಟರ್‌ನ ದಾಖಲಾತಿಗಳನ್ನು ಪರಿಶೀಲನೆ ಮಾಡಿ, ಸಂಚಾರ ನಿಯಮ ಉಲ್ಲಂಘನೆ ಮಾಡಿರುವ ಸವಾರನ ವಿರುದ್ಧ ಮೋಟಾರು ವಾಹನ ಕಾಯ್ದೆಯಡಿಯಲ್ಲಿ ಕೇಸು ದಾಖಲಿಸಿದ್ದಾರೆ.

ಹೆಲ್ಮಟ್ ಧರಿಸದೇ, ನಂಬ್ರ ಪ್ಲೇಟ್ ಮರೆಮಾಚಿರುವ ಬಗ್ಗೆ ದೋಷಪೂರಿತ ನಂಬ್ರ ಪ್ಲೇಟ್ ಬಳಕೆ, ನಿರ್ಲಕ್ಷ್ಯತನದ ಚಾಲನೆ, ಡಿ.ಎಲ್ ಇಲ್ಲದೇ ಚಾಲನೆ ಹಾಗೂ ಮೊಬೈಲ್ ಫೋನ್ ಬಳಕೆಯ ಆರೋಪದಲ್ಲಿ ಸವಾರನಿಗೆ 5,500 ರೂ. ದಂಡ ವಿಧಿಸಲಾಗಿದೆ ಎಂದು ಮಂಗಳೂರು ನಗರದ ಪೊಲೀಸರ ಪ್ರಕಟನೆ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts