ಅಪರಾಧ

ವಿಷ ಸೇವಿಸಿ ಆತ್ಮಹತ್ಯೆ; ಮಗ ಸಾವು, ತಾಯಿ ಗಂಭೀರ!

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಸುಬ್ರಹ್ಮಣ್ಯ:  ಇಲಿ ಪಾಷಾಣ ಸೇವಿಸಿ  ಅಮ್ಮ  ಮತ್ತು ಮಹಾತ್ಮೆಗೆ  ಯತ್ನಿಸಿದ್ದು, ಘಟನೆಯಲ್ಲಿ ಮಗ ಸಾವನ್ನಪ್ಪಿ ತಾಯಿ ಗಂಭೀರ ಸ್ಥಿತಿಯಲ್ಲಿ ಸುಳ್ಯದ ಆಸ್ಪತ್ರೆಗೆ ದಾಖಲಾದ ಘಟನೆ ಸುಳ್ಯ ತಾಲೂಕಿನ ಸುಬ್ರಹ್ಮಣ್ಯ ಸಮೀಪದ ನಾಲ್ಕೂರು ಗ್ರಾಮದಲ್ಲಿ ನಡೆದಿದೆ.

core technologies

ಘಟನೆಯಲ್ಲಿ ಮೃತಪಟ್ಟವರನ್ನು ನಡುಗಲ್ಲು ನಾಲ್ಕೂರು ಗ್ರಾಮದ ದೇರಪ್ಪಜ್ಜನಮನೆ ನಿವಾಸಿ ಕುಶಾಲಪ್ಪ ಗೌಡ ಎಂಬವರ ಮಗ ನಿತಿನ್ (32 ವ.) ಎಂದು ಗುರುತಿಸಲಾಗಿದೆ. ತಾಯಿ ಸುಲೋಚನಾ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

akshaya college

ಇಬ್ಬರೂ ಮೂರು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿದ್ದು ಅಸ್ವಸ್ಥಗೊಂಡಿರುವುದು ತಿಳಿದು ಬಂದಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮೃತ ನಿತಿನ್ ಐಟಿಐ ವಿದ್ಯಾಭ್ಯಾಸ ಹೊಂದಿದ್ದು, ತಮ್ಮ ಜಮೀನಿನಲ್ಲಿ ಕೃಷಿಕರಾಗಿ ದುಡಿಯುತ್ತಿದ್ದರು. ಕಳೆದ ಒಂದು ವರ್ಷದ ಹಿಂದೆ ದೀಕ್ಷಾ ಎಂಬವರನ್ನು ವಿವಾಹವಾಗಿದ್ದರು. ಪತ್ನಿ ತವರು ಮನೆಗೆ ಹೋಗಿದ್ದ ಸಂದರ್ಭದಲ್ಲಿ ವಿಷ ಸೇವಿಸಿದ್ದಾರೆ ಎಂದು ತಿಳಿದುಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts