ಶಿವಮೊಗ್ಗ: ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಅವರನ್ನು ಬಂಧಿಸಿದ ಘಟನೆ ಎ.9ರ ಬುಧವಾರ ನಡೆದಿದೆ.
ತೀವ್ರ ವಿಚಾರಣೆ ಬಳಿಕ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರಿಪಡಿಸಿದ್ದಾರೆ.
ಮಂಜುನಾಥ ಗೌಡ ಅವರನ್ನು 14 ದಿನ ಇ.ಡಿ. ವಶಕ್ಕೆ ನೀಡಲಾಗಿದೆ. ಬೆಂಗಳೂರಿನ 1ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಮಂಜುನಾಥ ಗೌಡ ಅವರನ್ನು ಹಾಜರುಪಡಿಸಲಾಗಿತ್ತು.
ಎ.8ರ ಮಂಗಳವಾರ ಬೆಳಗ್ಗೆ ಅಪೆಕ್ಸ್ ಬ್ಯಾಂಕ್ ಅತಿಥಿ ಗೃಹದಲ್ಲಿ ಮಂಜುನಾಥ ಗೌಡ ಅವರಿದ್ದ ಕೊಠಡಿ ಮೇಲೆ ದಾಳಿ ನಡೆಸಿದ್ದ ಇ.ಡಿ. ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ಮಂಗಳವಾರ ಸಂಜೆ ಇ.ಡಿ. ಕಚೇರಿಗೆ ಕರೆದೊಯ್ದು ವಿಚಾರಣೆ ನಡೆಸಲಾಗಿತ್ತು. ಇಂದು (ಎ.9ರ ಬುಧವಾರ) ಮಂಜುನಾಥ ಗೌಡ ಅವರನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.