tamanvi
ಅಪರಾಧ

ಸುಳ್ಯ: ಚಲಿಸುತ್ತಿದ್ದ ಕಾರಿನಲ್ಲಿ ಯುವಕರ ಪುಂಡಾಟ ಪ್ರಕರಣ; ಆರೋಪಿಗಳು ಪೊಲೀಸ್ ವಶಕ್ಕೆ..!

ಚಲಿಸುತ್ತಿದ್ದ ಕಾರಿನಲ್ಲಿ ಯುವಕರ ತಂಡ ಹುಚ್ಚಾಟ ಮೆರೆದ ಘಟನೆ ಸುಳ್ಯ ತಾಲೂಕು ಸಂಪಾಜೆ ಗ್ರಾಮದ ಗೂನಡ್ಕ ಪರಿಸರದಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕರನ್ನು ಸುಳ್ಯ ಪೊಲೀಸರು ಪತ್ತೆ ಹಚ್ಚಿ ವಿಚಾರಣೆ ನಡೆಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಸುಳ್ಯ: ಚಲಿಸುತ್ತಿದ್ದ ಕಾರಿನಲ್ಲಿ ಯುವಕರ ತಂಡ ಹುಚ್ಚಾಟ ಮೆರೆದ ಘಟನೆ ಸುಳ್ಯ ತಾಲೂಕು ಸಂಪಾಜೆ ಗ್ರಾಮದ ಗೂನಡ್ಕ ಪರಿಸರದಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕರನ್ನು ಸುಳ್ಯ ಪೊಲೀಸರು ಪತ್ತೆ ಹಚ್ಚಿ ವಿಚಾರಣೆ ನಡೆಸಿದ್ದಾರೆ.

ಚಲಿಸುತ್ತಿದ್ದ ಕಾರಿನಲ್ಲಿದ್ದ 7 ಜನರಲ್ಲಿ 6 ಮಂದಿ ಅಪಾಯಕಾರಿ ಸ್ಟಂಟ್ ಮಾಡಿದ್ದರು. ಈ ಯುವಕರ ದುಸ್ಸಾಹಸದ ವಿಡೀಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ವಿಡಿಯೋದಲ್ಲಿ ಇಬ್ಬರು ಯುವಕರು ವೇಗವಾಗಿ ಚಲಿಸುತ್ತಿರುವ ಕಾರಿನ ಸನ್‌ರೂಫ್‌ನಿಂದ ಹೊರಗೆ ನಿಂತಿದ್ದರೆ, ಇಬ್ಬರು ಹಿಂಬದಿಯ ಬಾಗಿಲುಗಳಿಂದ ಹೊರಗೆ ನೇತಾಡುತ್ತಿರುವುದು ಕಾಣಬಹುದು. ಪ್ರಯಾಣಿಕರ ಕಂಡುಬರುತ್ತದೆ. ಮತ್ತಿಬ್ಬರು ಯುವಕರು ಮುಂಭಾಗದ ಬಾಗಿಲುಗಳಿಂದ ಹೊರಬರುತ್ತಿರುವುದು

ಈ ಬಗ್ಗೆ ಸುಳ್ಯ ಪೊಲೀಸ್ ಠಾಣಾ ಅ,ಕ್ರ 50/25 ಕಲಂ:281 BNS 2023 ಮತ್ತು 184 IMV Act ಯಂತೆ ಪ್ರಕರಣ ದಾಖಲಿಸಿ ತನಿಖೆಗೆ ಇಳಿದಿದ್ದು, ಯುವಕರ ಗುಂಪು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದವರೆಂದು ಪತ್ತೆ ಮಾಡಿದ್ದಾರೆ. ಕಾರಿನಲ್ಲಿ 7 ಮಂದಿ ಇದ್ದು ಅವರು ಮಡಿಕೇರಿಯಿಂದ ಭಟ್ಕಳಕ್ಕೆ ತೆರಳುವ ವೇಳೆ ಈ ರೀತಿ ಅಪಾಯಕಾರಿ ಸ್ಟಂಟ್ ಮಾಡಿದ್ದಾರೆ. ಸಾಜೀಲ್ ಎಂಬಾತ ಕಾರನ್ನು ಚಾಲನೆ ಮಾಡುತ್ತಿದ್ದು, ಅತೀಫ್, ಸುಮನ್, ಜಯೇಶ್ (ಬಂದಿಲ್ಲ), ಸಾಜೀಬ್, ಸಾಹಿಬಝ್, ಹಸನ್ ಎಂಬವರು ಕಾರಿನ ಮೇಲೆ ಸ್ಟಂಟ್ ಮಾಡಿದ್ದಾರೆ ಎಂದು ವರದಿಯಾಗಿದೆ.

ಯುವಕರ ಗುಂಪನ್ನು ಸುಳ್ಯ ಪೊಲೀಸರು ಪತ್ತೆ ಹಚ್ಚಿ ಠಾಣೆಗೆ ಕರೆಸಿಕೊಂಡು ವಿಚಾರಣೆ ನಡೆಸಿದ್ದಾರೆ. ಈ ಬಗ್ಗೆ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಿದ್ದು, ನ್ಯಾಯಾಲಯದಲ್ಲಿ ಎನ್ನಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

1 of 119