Gl harusha
ಅಪರಾಧ

ಕಾರು ಅಪಘಾತ: ಗಾಂಜಾ ಸಾಗಿಸುತ್ತಿದ್ದ ಪುತ್ತೂರಿನ ಮೂವರ ಬಂಧನ

ಪುತ್ತೂರಿನಿಂದ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಮೂವರು ಯುವಕರನ್ನು ಮಡಿಕೇರಿ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಅವರಿದ್ದ ಕಾರು ದೇವರಕೊಲ್ಲಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದಾಗ ಈ ಘಟನೆ ಬೆಳಕಿಗೆ ಬಂದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಡಿಕೇರಿ: ಪುತ್ತೂರಿನಿಂದ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಮೂವರು ಯುವಕರನ್ನು ಮಡಿಕೇರಿ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಅವರಿದ್ದ ಕಾರು ದೇವರಕೊಲ್ಲಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದಾಗ ಈ ಘಟನೆ ಬೆಳಕಿಗೆ ಬಂದಿದೆ.

srk ladders
Pashupathi

ಪಿರಿಯಾಪಟ್ಟಣದಿಂದ ಪುತ್ತೂರಿಗೆ ತೆರಳುತ್ತಿದ್ದ KL 14 AC 1248 ನೋಂದಣಿಯ ಸ್ವಿಫ್ಟ್ ಕಾರು ದೇವರಕೊಲ್ಲಿ ಸಮೀಪ ರಸ್ತೆಯ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದು ಉರುಳಿ ಬಿದ್ದಿದೆ. ಅಪಘಾತದ ನಂತರ ಸ್ಥಳೀಯರು ಸಹಾಯಕ್ಕೆ ಬಂದಾಗ ಕಾರಿನೊಳಗೆ ಗಾಂಜಾ ಪೊಟ್ಟಣಗಳು ಕಂಡುಬಂದಿವೆ.

ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಧಾವಿಸಿದ ಪೊಲೀಸರು ಕಾರಿನಲ್ಲಿದ್ದ ಕಬಕದ ಫಾಝರೀದ್ (27), ದರ್ಬೆಯ ಮೊಹಮ್ಮದ್ ಮುಸ್ತಾಫ್ (27) ಮತ್ತು ಚಾಬಿರ್ ಎಂಬ ಮೂವರನ್ನು ಬಂಧಿಸಿದ್ದಾರೆ. ಪೊಲೀಸರು ಕಾರು ಮತ್ತು ಗಾಂಜಾವನ್ನು ವಶಪಡಿಸಿಕೊಂಡಿದ್ದು, ಪ್ರಕರಣ  ತನಿಖೆ ನಡೆಸುತ್ತಿದ್ದಾರೆ.

ಈ ಹಿಂದೆ ಗೋಣಿಕೊಪ್ಪಲು ಮೈಸೂರು ರಸ್ತೆಯ ಪಿರಿಯಾಪಟ್ಟಣ ಭಾಗದಲ್ಲಿ ಗಾಂಜಾ ಮಾರಾಟದ ಬಗ್ಗೆ ದೂರುಗಳು ಕೇಳಿಬಂದಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರು ಮತ್ತು ಕಾರಿನ ಮಾಲೀಕರ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಮಂಗಳೂರು – ಉಳ್ಳಾಲ ಬಸ್’ನಲ್ಲಿ ಯುವತಿಯ ಮುಟ್ಟಿ ವಿಕೃತಿ! ಬಸ್ ನಿರ್ವಾಹಕನ ಅಮಾನತುಗೊಳಿಸಿದ KSRTC ಡಿಸಿ!

ಕೆಎಸ್ಸಾರ್ಟಿಸಿ ಬಸ್ ನಿರ್ವಾಹಕನೊಬ್ಬನ ವಿರುದ್ಧ ಲೈಂಗಿಕ ಕಿರುಕುಳ, ದೌರ್ಜನ್ಯ ಪ್ರಕರಣ ದಾಖಲಾದ…