ಪ್ರತಿಭಟನಾ ನಿರತ ರೈತರ ಮೇಲೆ ಕ್ರಷರ್ ಮಾಲೀಕ ಗುಂಡು ಹಾರಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ತಾಲೂಕಿನ ಕನಗಾನಗುಪ್ಪ ಗ್ರಾಮದಲ್ಲಿ ಇಂದು ನಡೆದಿದೆ.
ರೈತರು ಮತ್ತು ಸ್ಥಳೀಯ ಜನರು ಸೇರಿ ರಸ್ತೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ ಕ್ರಷರ್ ಮಾಲೀಕರ ವಿರುದ್ಧ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರು. ಇಂದು ಕೂಡಾ ಪ್ರತಿಭಟನೆ ನಡೆಯುತ್ತಿದ್ದು, ಕ್ರಷರ್ ಮಾಲೀಕ ಬಂದು ರೈತರ ಮೇಲೆ ಗುಂಡು ಹಾರಿಸಿದ್ದು, ಇಬ್ಬರು ರೈತರಿಗೆ ಗಂಭೀರ ಗಾಯಗಳಾಗಿರುವ ಕುರಿತು ವರದಿಯಾಗಿದೆ.
ಗಾಯಗೊಂಡವರನ್ನು ಚಿಕ್ಕಬಳ್ಳಾಪುರ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.