tamanvi
ಅಪರಾಧ

ಮಂಗಳೂರು – ಉಳ್ಳಾಲ ಬಸ್’ನಲ್ಲಿ ಯುವತಿಯ ಮುಟ್ಟಿ ವಿಕೃತಿ! ಬಸ್ ನಿರ್ವಾಹಕನ ಅಮಾನತುಗೊಳಿಸಿದ KSRTC ಡಿಸಿ!

D_shiva_bhat
ಕೆಎಸ್ಸಾರ್ಟಿಸಿ ಬಸ್ ನಿರ್ವಾಹಕನೊಬ್ಬನ ವಿರುದ್ಧ ಲೈಂಗಿಕ ಕಿರುಕುಳ, ದೌರ್ಜನ್ಯ ಪ್ರಕರಣ ದಾಖಲಾದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಕೆಎಸ್ಸಾರ್ಟಿಸಿ ಬಸ್ ನಿರ್ವಾಹಕನೊಬ್ಬನ ವಿರುದ್ಧ ಲೈಂಗಿಕ ಕಿರುಕುಳ, ದೌರ್ಜನ್ಯ ಪ್ರಕರಣ ದಾಖಲಾದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

maithri

ಮಂಗಳೂರು- ಉಳ್ಳಾಲ ನಡುವೆ ಸಂಚರಿಸುವ ಕೆಎಸ್ಸಾರ್ಟಿಸಿ ಬಸ್‌ ನಿರ್ವಾಹಕ ಪ್ರದೀಪ್ ಕಾಶಪ್ಪ (40) ಎಂಬಾತನ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೀಟ್‌ನಲ್ಲಿ ಕುಳಿತು ನಿದ್ರಿಸುತ್ತಿದ್ದ ಯುವತಿಗೆ ಅರಿವಿಲ್ಲದಂತೆ ಮೈಮುಟ್ಟಿ ವಿಕೃತಿ ಮೆರೆಯುತ್ತಿದ್ದ ಕಂಡಕ್ಟರ್. ಇದನ್ನು ವಿಡಿಯೋ ಚಿತ್ರೀಕರಿಸಿ ಸಹ ಪ್ರಯಾಣಿಕರೋರ್ವರು ಈತನ ಕೃತ್ಯವನ್ನು ಬಹಿರಂಗ ಪಡಿಸಿದ್ದರು.

ಈಗಾಗಲೇ ನಿರ್ವಾಹಕನನ್ನು ಮಂಗಳೂರು ಕೆಎಸ್ಸಾರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಅಮಾನತುಗೊಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

1 of 117