ಮೇಲಾದೀಕಾರಿಗಳ ಕಿರುಕುಳಕ್ಕೆ ಬೆಸತ್ತು ಅರಣ್ಯ ವೀಕ್ಷಕರೊಬ್ಬರು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುಂಡ್ಲುಪೇಟೆ ತಾಲ್ಲೂಕಿನ ಬೇರಂಬಾಡಿ ನಿವಾಸಿ ಸುರೇಶ್ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.
ಅರಣ್ಯ ವೀಕ್ಷಕ ಸುರೇಶ್, ACF ಅಮೃತ ಎಂಬುವರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದು, ಶವ ಅರಣ್ಯ ಸಿಬ್ಬಂದಿಗೆ ನೀಡುವ ಕ್ವಾರ್ಟಸ್‌ಲ್ಲಿ ಸುರೇಶ್ ಅವರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಡೆತ್‌ನೋಟ್ ಇದ್ದರೂ ಅಧಿಕಾರಿಗಳ ವಿರುದ್ಧ ಯಾವುದೇ ಪ್ರಕರಣ ದಾಖಲಿಸಿಲ್ಲ. ಪೊಲೀಸರು ಹಿರಿಯ ಅಧಿಕಾರಿಗಳ ರಕ್ಷಣೆಗೆ ಮುಂದಾಗಿದ್ದಾರೆ ಎಂದು ಸುರೇಶ್ ಕುಟುಂಬದವರು ಗಂಭೀರ ಆರೋಪ ಮಾಡಿದ್ದಾರೆ.
ನನ್ನ ಮಗನ ಸಾವಿಗೆ ನ್ಯಾಯ ಕೊಡಿಸಿ ಎಂದು ಕುಟುಂಬಸ್ಥರು ಹಾಗೂ ಸ್ಥಳೀಯರು ಆಗ್ರಹಿಸಿದ್ದಾರೆ.