Gl
ಅಪರಾಧ

ಅಪ್ಪನ ಸೇಡು | “ನನ್ನ ಮಗಳ ಕೊಂದು, ನಿನ್ನ ಮಗಳ ಮದುವೆ ಮಾಡಿಸುವೆಯಾ? ಎನ್ನುತ್ತಾ ಭೀಕರವಾಗಿ ಹತ್ಯೆ

ಮಗಳ ಸಾವಿಗೆ ಪ್ರತೀಕಾರಕ್ಕೆ ಹತ್ಯೆ ಆರೋಪಿಯ ತಂದೆಯನ್ನೇ ಆಕೆಯ ತಂದೆ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮಾಣಿಕ್ಯನಹಳ್ಳಿಯಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಗಳ ಸಾವಿಗೆ ಪ್ರತೀಕಾರಕ್ಕೆ ಹತ್ಯೆ ಆರೋಪಿಯ ತಂದೆಯನ್ನೇ ಆಕೆಯ ತಂದೆ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮಾಣಿಕ್ಯನಹಳ್ಳಿಯಲ್ಲಿ ನಡೆದಿದೆ.

rachana_rai
Pashupathi

ಮಂಡ್ಯದ ಮಾಣಿಕ್ಯನಹಳ್ಳಿ ಗ್ರಾಮದ ನರಸಿಂಹೇಗೌಡ ಕೊಲೆಯಾದ ವ್ಯಕ್ತಿ. ಅದೇ ಗ್ರಾಮದ ವೆಂಕಟೇಶ್ ಕೊಲೆ ಆರೋಪಿ.

akshaya college

ಬೆಳ್ಳಾಲೆ ಗೇಟ್ ಬಳಿಯ ಚಹಾ ಅಂಗಡಿಯಲ್ಲಿ ನರಸಿಂಹೆ ಚಹಾ ಕುಡಿಯುತ್ತಿದ್ದಾಗ ಹಿಂದಿನಿಂದ ಬಂದು ನರಸಿಂಹಗೆ ಚಾಕುವಿನಿಂದ ಹಲವು ಬಾರಿ ಇರಿದ ಘಟನೆ ನಡೆದಿದೆ.

ಮಾಣಿಕ್ಯಹಳ್ಳಿ ಗ್ರಾಮದ ದೀಪಿಕಾಳನ್ನು ಅದೇ ಗ್ರಾಮದ ನಿತೀಶ್ ಎಂಬಾತ 2024ರ ಜನವರಿ 22ರಂದು ಬರ್ಬರವಾಗಿ ಕೊಲೆ ಮಾಡಿದ್ದ. ಇದೇ ಪ್ರತೀಕಾರವಾಗಿ ದೀಪಾಳ ತಂದೆ ವೆಂಕಟೇಶ್, ತನ್ನ ಮಗಳ ಹಂತಕನ ತಂದೆ ನರಸಿಂಹೇಗೌಡ ಅವರನ್ನು ಹತ್ಯೆ ಮಾಡಿದ್ದಾನೆ.

“ನನ್ನ ಮಗಳನ್ನ ಸಾಯಿಸಿ ನಿನ್ನ ಮಗಳಿಗೆ ಮದುವೆ ಮಾಡುತ್ತಿದ್ದಿಯಾ” ಎಂದು ಹೇಳುತ್ತಾ ಬರ್ಬರವಾಗಿ ಕೊಲೆ ಮಾಡಿದ್ದಾನೆ.

ದೀಪಿಕಾ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮಾಣಿಕ್ಯಹಳ್ಳಿ ಗ್ರಾಮದವಳು. ಈಕೆಯನ್ನು 2024 ಜನವರಿ 22 ರಂದು ಅದೇ ಗ್ರಾಮದ ನಿತೀಶ್ ಎಂಬಾತ ಬರ್ಬರವಾಗಿ ಕೊಲೆ ಮಾಡಿದ್ದ.

ದೀಪಿಕಾ ಲೋಕೇಶ್ ಎಂಬುವವರನ್ನು ವಿವಾಹವಾಗಿದ್ದರು ಮತ್ತು ಕೊಲೆಯಾದ ಸಮಯದಲ್ಲಿ ದಂಪತಿಗೆ ಎಂಟು ತಿಂಗಳ ಮಗುವಿತ್ತು.

2024 ಜನವರಿ 19 ರಂದು ಮಾಣಿಕ್ಯನಹಳ್ಳಿ ಗ್ರಾಮದ ದೀಪಿಕಾ ನಾಪತ್ತೆಯಾಗಿದ್ದಳು. ಬಳಿಕ ಆಕೆ ಜನವರಿ 23ರಂದು ಮೇಲುಕೋಟೆಯ ಬೆಟ್ಟದಲ್ಲಿ ಶವವಾಗಿ ಪತ್ತೆಯಾಗಿದ್ದಳು. ಈ ವೇಳೆ ರಾಜ್ಯದಲ್ಲಿ ದೊಡ್ಡಮಟ್ಟದ ಸುದ್ದಿಯಾಗಿತ್ತು. ಬಳಿಕ ಮಂಡ್ಯ ಪೊಲೀಸರು ಮಾಣಿಕ್ಯನಹಳ್ಳಿ ಗ್ರಾಮದ ನಿತೀಶ್ ಎಂಬ ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ಈ ಕೊಲೆ‌ ಮಾಡಿದ್ದು ಬೇರೆ ಯಾರು ಅಲ್ಲ ನಿತೀಶ್ ಎಂದು ತಿಳಿದಿತ್ತು.

ತನಿಖೆಯ ಸಮಯದಲ್ಲಿ, ದೀಪಿಕಾಳನ್ನು ಸಮಾಧಿ ಮಾಡಿದ ಸ್ಥಳದ ಬಳಿ ನಿತೀಶ್ ಹಲ್ಲೆ ನಡೆಸುತ್ತಿರುವ ದೃಶ್ಯವನ್ನು ಭಕ್ತನೊಬ್ಬ ತನ್ನ ಮೊಬೈಲ್ ಫೋನ್‌ನಲ್ಲಿ ಸೆರೆಹಿಡಿದ ವೀಡಿಯೊವನ್ನು ಪೊಲೀಸರು ಪತ್ತೆ ಹಚ್ಚಿದ್ದರು. ಈ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ವೀಡಿಯೊ ದೃಶ್ಯಾವಳಿಗಳನ್ನು ಆಧರಿಸಿ, ಪೊಲೀಸರು ನಿತೀಶ್ ಅವರನ್ನು ಬಂಧಿಸಿ ಕೊಲೆ ಆರೋಪದ ಮೇಲೆ ಜೈಲಿಗೆ ಕಳುಹಿಸಿದರು. ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಅಪರಾಧ ಸ್ಥಳಕ್ಕೆ ಭೇಟಿ ನೀಡಿ ವಿವರಗಳನ್ನು ಸಂಗ್ರಹಿಸಿದರು. ಮೇಲುಕೋಟೆ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts