ಕಿಡಿಗೇಡಿಗಳು ಹಸುವಿನ ಕೆಚ್ಚಲು ಕತ್ತರಿಸಿರುವ ಘಟನೆ ತಾಲೂಕಿನ ಗಡಿ ಗ್ರಾಮವಾದ ಚೌಳಹಿರಿಯೂರು ಸಮೀಪದ ತಮ್ಮಿಹಳ್ಳಿಯಲ್ಲಿ ನಡೆದಿದೆ.
ಚೌಳಹಿರಿಯೂರಿನ ತಮ್ಮಿಹಳ್ಳಿ ಗ್ರಾಮದ ಶೇಖರಪ್ಪ ಎಂಬುವರಿಗೆ ಸೇರಿದ ಸುಮಾರು 20 ದನಗಳನ್ನು ಕಳ್ಳರು ತಂತಿ ಬೇಲಿಯೊಳಗೆ ಹಿಡಿದು ಕೂಡಿ ಹಾಕಿ ಬೇರೆಡೆಗೆ ಸಾಗಿಸಲು ಪ್ರಯತ್ನಿಸಿದ್ದಾರೆ. ಆ ಪ್ರಯತ್ನ ವಿಫಲಗೊಂಡಿದ್ದರಿಂದ ಒಂದು ಹಸುವಿನ ಕೆಚ್ಚಲು ಕತ್ತರಿಸಿ ಪರಾರಿಯಾಗಿದ್ದಾರೆ. ಬಳಿಕ ಈ ಹಸು ಸತ್ತಿದ್ದು ಈ ಕೃತ್ಯವನ್ನು ಗ್ರಾಮಸ್ಥರು ಖಂಡಿಸುವ ಮೂಲಕ ರೈತರು ಯಗಟಿ ಠಾಣೆಗೆ ದೂರು ನೀಡಿದ್ದಾರೆ.
ಬಳಿಕ ಬೀರೂರು ಸರ್ಕಲ್ ಇನ್ಸ್ ಪೆಕ್ಟರ್ ಶ್ರೀಕಾಂತ್, ಯಗಟಿ ಪಿಎಸ್‍ಐ ಮಂಜುನಾಥ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.