tamanvi
ಅಪರಾಧ

ಹಸುವಿನ ಕೆಚ್ಚಲು ಕತ್ತರಿಸಿದ ದುಷ್ಕರ್ಮಿಗಳು!

ಕಿಡಿಗೇಡಿಗಳು ಹಸುವಿನ ಕೆಚ್ಚಲು ಕತ್ತರಿಸಿರುವ ಘಟನೆ ತಾಲೂಕಿನ ಗಡಿ ಗ್ರಾಮವಾದ ಚೌಳಹಿರಿಯೂರು ಸಮೀಪದ ತಮ್ಮಿಹಳ್ಳಿಯಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಕಿಡಿಗೇಡಿಗಳು ಹಸುವಿನ ಕೆಚ್ಚಲು ಕತ್ತರಿಸಿರುವ ಘಟನೆ ತಾಲೂಕಿನ ಗಡಿ ಗ್ರಾಮವಾದ ಚೌಳಹಿರಿಯೂರು ಸಮೀಪದ ತಮ್ಮಿಹಳ್ಳಿಯಲ್ಲಿ ನಡೆದಿದೆ.

ಚೌಳಹಿರಿಯೂರಿನ ತಮ್ಮಿಹಳ್ಳಿ ಗ್ರಾಮದ ಶೇಖರಪ್ಪ ಎಂಬುವರಿಗೆ ಸೇರಿದ ಸುಮಾರು 20 ದನಗಳನ್ನು ಕಳ್ಳರು ತಂತಿ ಬೇಲಿಯೊಳಗೆ ಹಿಡಿದು ಕೂಡಿ ಹಾಕಿ ಬೇರೆಡೆಗೆ ಸಾಗಿಸಲು ಪ್ರಯತ್ನಿಸಿದ್ದಾರೆ. ಆ ಪ್ರಯತ್ನ ವಿಫಲಗೊಂಡಿದ್ದರಿಂದ ಒಂದು ಹಸುವಿನ ಕೆಚ್ಚಲು ಕತ್ತರಿಸಿ ಪರಾರಿಯಾಗಿದ್ದಾರೆ. ಬಳಿಕ ಈ ಹಸು ಸತ್ತಿದ್ದು ಈ ಕೃತ್ಯವನ್ನು ಗ್ರಾಮಸ್ಥರು ಖಂಡಿಸುವ ಮೂಲಕ ರೈತರು ಯಗಟಿ ಠಾಣೆಗೆ ದೂರು ನೀಡಿದ್ದಾರೆ.

ಬಳಿಕ ಬೀರೂರು ಸರ್ಕಲ್ ಇನ್ಸ್ ಪೆಕ್ಟರ್ ಶ್ರೀಕಾಂತ್, ಯಗಟಿ ಪಿಎಸ್‍ಐ ಮಂಜುನಾಥ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

1 of 119