tamanvi
ಅಪರಾಧ

ಬಂಟ್ವಾಳ ರಹೀಮ್ ಕೊಲೆ ಪ್ರಕರಣ: ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ!

ಬಂಟ್ವಾಳದ ಕೊಳತ್ತಮಜಲು ಬಳಿ ನಡೆದ ಅಬ್ದುಲ್ ರಹಿಮಾನ್ ಎಂಬ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಪೊಲೀಸರಿಗೆ ಹೇಳಿದ್ದೇನೆ ಎಂದು ತಿಳಿಸಿದರು.

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಬಂಟ್ವಾಳದ ಕೊಳತ್ತಮಜಲು ಬಳಿ ನಡೆದ ಅಬ್ದುಲ್ ರಹಿಮಾನ್ ಎಂಬ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಪೊಲೀಸರಿಗೆ ಹೇಳಿದ್ದೇನೆ ಎಂದು ತಿಳಿಸಿದರು.

ಈ ಸಂಬಂಧ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,”ದಕ್ಷಿಣ ಕನ್ನಡದ ಬಂಟ್ವಾಳದಲ್ಲಿ ಯುವಕನೊಬ್ಬನ ಹತ್ಯೆ ಆಗಿದ್ದು, ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಪೊಲೀಸರಿಗೆ ಹೇಳಿದ್ದೇನೆ” ಎಂದರು.

ದುಷ್ಕರ್ಮಿಗಳ ತಂಡವೊಂದು ಇಬ್ಬರ ಮೇಲೆ ತಲವಾರು ದಾಳಿ ಮಾಡಿದ ಪರಿಣಾಮ ಓರ್ವ ಮೃತಪಟ್ಟು ಇನ್ನೋರ್ವ ಗಾಯಗೊಂಡಿರುವ ಘಟನೆ ಅತ್ತೂರು ಕೊಲ್ತಮಜಲು ಎಂಬಲ್ಲಿ ಮಂಗಳವಾರ ನಡೆದಿತ್ತು.

ಘಟನೆಯಲ್ಲಿ ಕೊಲ್ತಮಜಲು ಬೆಲ್ಲೂರು ನಿವಾಸಿ ಅಬ್ದುಲ್ ಖಾದ‌ರ್ ಎಂಬವರ ಮಗ ಅಬ್ದುಲ್ ರಹಿಮಾನ್ ಮೃತಪಟ್ಟಿದ್ದರು. ಅಲ್ಲದೆ, ಮತ್ತೋರ್ವ ಯುವಕ ಕಲಂದ‌ರ್ ಶಾಫಿ ಗಾಯಗೊಂಡಿದ್ದರು.

ಇಬ್ಬರೂ ಕೊಳ್ತಮಜಲು ಎಂಬಲ್ಲಿ ಪಿಕ್ ಅಪ್ ವಾಹನದಲ್ಲಿ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ದುಷ್ಕರ್ಮಿಗಳು ತಲವಾರು ದಾಳಿ ಮಾಡಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮನೆಗೆ ಬಿಡುವುದಾಗಿ ಬೈಕ್‌ನಲ್ಲಿ ಕರೆತಂದು ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೋ ಪ್ರಕರಣ ದಾಖಲು

ಮಂಗಳೂರು: ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅಪ್ರಾಪ್ತ ಬಾಲಕಿಯನ್ನು ಮನೆಗೆ ಬಿಡುವುದಾಗಿ…

1 of 119