ಅಪರಾಧ

ಅಬ್ದುಲ್ ರಹೀಂ ಕೊಲೆ ಕೇಸ್: ಸಂಜಯ್ ವಶಕ್ಕೆ!

ಕೊಳತ್ತಮಜಲು ಅಬ್ದುಲ್ ರಹೀಂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಮತ್ತೆ ಒಬ್ಬನನ್ನು ಬಂಧಿಸಿದ್ದಾರೆ.ಇದರೊಂದಿಗೆ ಬಂಧಿತರ ಸಂಖ್ಯೆ 8ಕ್ಕೇರಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಕೊಳತ್ತಮಜಲು ಅಬ್ದುಲ್ ರಹೀಂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಮತ್ತೆ ಒಬ್ಬನನ್ನು ಬಂಧಿಸಿದ್ದಾರೆ.ಇದರೊಂದಿಗೆ ಬಂಧಿತರ ಸಂಖ್ಯೆ 8ಕ್ಕೇರಿದೆ.

akshaya college

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಬೆಟ್ಟಗೆರೆ ಗ್ರಾಮದ ನಿವಾಸಿ ಸಂಜಯ್ (29) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.

ಈಗಾಗಲೆ ಕುರಿಯಾಳ ಗ್ರಾಮದ ದೀಪಕ್ (21), ಅಮ್ಮುಂಜೆ ಗ್ರಾಮದ ಪೃಥ್ವಿರಾಜ್ (21), ಚಿಂತನ್ (19), ತೆಂಕಬೆಳ್ಳೂರು ಗ್ರಾಮದ ಸುಮಿತ್ ಆಚಾರ್ಯ (27), ಬಡಗಬೆಳ್ಳೂರು ಗ್ರಾಮದ ರವಿರಾಜ್ (23), ತೆಂಕಬೆಳ್ಳೂರು ಗ್ರಾಮದ ಅಭಿನ್ ರೈ (32) ಮತ್ತು ಬಡಗಬೆಳ್ಳೂರು ಗ್ರಾಮದ ತೇಜಾಕ್ಷ (24) ಎಂಬವರನ್ನು ಪೊಲೀಸರು ಬಂಧಿಸಿದ್ದರು.

ಕಾಂಬೋಡಿ ಇರಾಕೋಡಿಗೆ ಅಬ್ದುಲ್ ರಹೀಂ ತನ್ನ ಪಿಕಪ್‌ನಲ್ಲಿನ ಮರಳು ಅನ್‌ಲೋಡ್ ಮಾಡುತ್ತಿದ್ದಾಗ ದುಷ್ಕರ್ಮಿಗಳು ಮಾರಕಾಯುಧದಿಂದ ಗಂಭೀರ ಹಲ್ಲೆ ಮಾಡಿ ಕೊಲೆ ಮಾಡಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts