pashupathi
ಅಪರಾಧ

ಆಳ್ವಾಸ್ ಕಾಲೇಜ್ ಎಂಬಿಎ ವಿದ್ಯಾರ್ಥಿ ಸಂಕೀರ್ತನ್ ಮೃತ್ಯು!

tv clinic
ಆಳ್ವಾಸ್ ಕಾಲೇಜಿನ ಎಂಬಿಎ ವಿದ್ಯಾರ್ಥಿ ಕಿದಿಯೂರು ನಿವಾಸಿ ಸಂಕೀರ್ತನ್(28) ಬಲಿಯಾಗಿದ್ದಾರೆ. 

ಈ ಸುದ್ದಿಯನ್ನು ಶೇರ್ ಮಾಡಿ

ಉಡುಪಿ: ಕಾರು ಚಾಲಕನ ಅಜಾಗರೂಕತೆಗೆ ಸಿದ್ಧ ಭಕ್ತಿ ಗಾಯಕ ಮತ್ತು ತಬಲಾ ವಾದಕ, ಆಳ್ವಾಸ್ ಕಾಲೇಜಿನ ಎಂಬಿಎ ವಿದ್ಯಾರ್ಥಿ ಕಿದಿಯೂರು ನಿವಾಸಿ ಸಂಕೀರ್ತನ್(28) ಬಲಿಯಾಗಿದ್ದಾರೆ. 

akshaya college

ಉಡುಪಿಯ ಕಿನ್ನಿಮುಲ್ಕಿ ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಈ ಘಟನೆ ಸಂಭವಿಸಿದೆ. ಕುಂದಾಪುರದಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಕಾರನ್ನು ಚಾಲಕ ನಿರ್ಲಕ್ಷ್ಯ ಮತ್ತು ಅಜಾಗರೂಕತೆಯಿಂದ ಚಲಾಯಿಸಿದ್ದರಿಂದ ಕಾರು ಮೊದಲು ಗೂಡ್ಸ್‌ ವಾಹನವೊಂದಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ರಸ್ತೆ ಡಿವೈಡರ್ ಏರಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಮತ್ತೊಂದು ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ಕಾರಿನ ಹಿಂದೆ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ನಲ್ಲಿ ಸಂಕೀರ್ತನ್ ರಸ್ತೆಗೆ ಬಿದ್ದು ತೀವ್ರ ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯುವಾಗ ಸಾವನ್ನಪ್ಪಿದ್ದಾರೆ. ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭಜನೆ ಹಾಡುಗಾರ ಕಿದಿಯೂರಿನ ಸುರೇಶ್ ಆಚಾರ್ಯ ಅವರ ಪುತ್ರನಾಗಿದ್ದ ಸಂಕೀರ್ತನ್ ತಬಲಾ, ಹಾರ್ಮೋನಿಯಂ ವಾದಕರಾಗಿದ್ದರು. ನಿತ್ಯಾನಂದ ಭಜನ ಮಂದಿರ, ಕನ್ನರ್ಪಾಡಿ ಜಯದುರ್ಗಾಪರಮೇಶ್ವರೀ, ಪ್ರಸನ್ನ ಗಣಪತಿ, ವೀರ ವಿಠಲ ದೇವಸ್ಥಾನಲ್ಲಿ ಭಜನ ಕಾರ್ಯಕ್ರಮದಲ್ಲಿ ಸಕ್ರಿಯರಾಗಿದ್ದರು. ಪ್ರಸ್ತುತ ಅವರು ಮೂಡುಬಿದಿರೆ ಆಳ್ವಾಸ್ ಎಂಜಿನಿಯರ್ ಕಾಲೇಜಿನಲ್ಲಿ ಅಂತಿಮ ಎಂಬಿಎ ವಿದ್ಯಾರ್ಥಿಯಾಗಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts