ಅಪರಾಧ

ಜುಗಾರಿ ಅಡ್ಡೆಗೆ ದಾಳಿ: ವಿಟ್ಲ ಎಸ್.ಐ. ಅಮಾನತು!!

ವಿಟ್ಲ: ಜುಗಾರಿ ಆಡುವ ಸ್ಥಳಕ್ಕೆ ದಾಳಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಟ್ಲ ಪೊಲೀಸ್ ಠಾಣಾ ಪಿ.ಎಸ್.ಐ. ಅವರನ್ನು ಅಮಾನತುಗೊಳಿಸಿ ಎಸ್ಪಿ ಆದೇಶಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ವಿಟ್ಲ: ಜುಗಾರಿ ಆಡುವ ಸ್ಥಳಕ್ಕೆ ದಾಳಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಟ್ಲ ಪೊಲೀಸ್ ಠಾಣಾ ಪಿ.ಎಸ್.ಐ. ಅವರನ್ನು ಅಮಾನತುಗೊಳಿಸಿ ಎಸ್ಪಿ ಆದೇಶಿಸಿದ್ದಾರೆ.

ಮೇ 08.ಲರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜುಗಾರಿ ಆಡುವ ಬಗ್ಗೆ ಮಾಹಿತಿ ದೊರೆತ ಮೇರೆಗೆ, ಪಿ.ಎಸ್.ಐ. ಕೌಶಿಕ್ ಬಿ ಸಿ ದಾಳಿ ಮಾಡಿದಾಗ, ಘಟನಾ ಸ್ಥಳದಲ್ಲಿ ಜುಗಾರಿ ಆಟದಲ್ಲಿ ತೊಡಗಿದ್ದವರು ಪತ್ತೆಯಾಗಿರಲಿಲ್ಲ. ಆದರೆ ಸ್ಥಳದಲ್ಲಿ ಮೋಟಾರು ಸೈಕಲ್ ಕಂಡುಬಂದಿತ್ತು.

ಆದರೂ ಪಿ ಎಸ್ ಐ ಕೌಶಿಕ್ ಬಿ ಸಿ ರವರು ಈ ಬಗ್ಗೆ ಕಾನೂನಾತ್ಮಕ ಕ್ರಮ ಜರುಗಿಸದೇ ಬೈಕ್ ಮಾಲಕನಿಗೆ ಕರೆ ಮಾಡಿ ಠಾಣೆಗೆ ಬರಮಾಡಿಕೊಂಡಿದ್ದರು ಎಂದು ಆರೋಪಿಸಲಾಗಿದೆ.

ಬಳಿಕ ಬೈಕ್‌ ಮಾಲಿಕನಿಗೆ ಮೂರನೇ ವ್ಯಕ್ತಿಯ ಮೂಲಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣದ ಬೇಡಿಕೆಯಿಟ್ಟಿರುವ ಸಂಭಾಷಣೆಯು ಸಾಮಾಜಿಕ ಜಾಲತಾಣದ ಮೂಲಕ ಪ್ರಸಾರವಾಗಿರುತ್ತದೆ. ಈ ಘಟನೆಗೆ ಸಂಬಂಧಿಸಿದಂತೆ ಅಧಿಕಾರಿಯ ಮೇಲೆ ಮೇ 12ರಂದು ಇಲಾಖಾ ಶಿಸ್ತು ಕ್ರಮ ಬಾಕಿಯಿರುವಂತೆ ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ ಎಂದು ತಿಳಿದುಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts