Gl
ಅಪರಾಧ

ಚಿಕ್ಕಪುತ್ತೂರು:7 ತಿಂಗಳ ಗರ್ಭಿಣಿ ರೇಷ್ಮ ಆತ್ಮಹತ್ಯೆ!!

ತುಂಬು ಗರ್ಭಿಣಿಯೊಬ್ಬರು ನೇಣು ಬಿಗಿದು ಜೀವಾಂತ್ಯ ಮಾಡಿಕೊಂಡ ಹೃದಯವಿದ್ರಾವಕ ಘಟನೆ ನಗರದ ಚಿಕ್ಕಪುತ್ತೂರಿನಲ್ಲಿ ಜೂ. 15ರ ರಾತ್ರಿ ವರದಿಯಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ತುಂಬು ಗರ್ಭಿಣಿಯೊಬ್ಬರು ನೇಣು ಬಿಗಿದು ಜೀವಾಂತ್ಯ ಮಾಡಿಕೊಂಡ ಹೃದಯವಿದ್ರಾವಕ ಘಟನೆ ನಗರದ ಚಿಕ್ಕಪುತ್ತೂರಿನಲ್ಲಿ ಜೂ. 15ರ ರಾತ್ರಿ ವರದಿಯಾಗಿದೆ.

rachana_rai
Pashupathi
akshaya college
Balakrishna-gowda

ಚಿಕ್ಕಪುತ್ತೂರಿನ ನಿವಾಸಿ, ಪುತ್ತಿಲ ಪರಿವಾರದ ಮುಖಂಡ ಚಿಂತನ್ ಅವರ ಪತ್ನಿ ರೇಷ್ಮಾ (28) ಮೃತ ದುರ್ದೈವಿ. ಏಳು ತಿಂಗಳ ಗರ್ಭಿಣಿಯಾಗಿದ್ದ ರೇಷ್ಮಾ ಅವರು, ತಾವು ವಾಸವಿದ್ದ ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.

pashupathi

ಸುರತ್ಕಲ್ ಮೂಲದ ರೇಷ್ಮಾ ಅವರನ್ನು ನಾಲ್ಕು ವರ್ಷಗಳ ಹಿಂದೆ ಚಿಕ್ಕಪುತ್ತೂರಿನ ಚಿಂತನ್ ಅವರಿಗೆ ವಿವಾಹ ಮಾಡಿಕೊಡಲಾಗಿತ್ತು. ಈ ದಂಪತಿಗೆ ಓರ್ವ ಪುತ್ರಿಯಿದ್ದಾಳೆ. ಚಿಂತನ್, ರೇಷ್ಮಾ ಮತ್ತು ಅವರ ಪುತ್ರಿ ಚಿಕ್ಕಪುತ್ತೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಜೂ. 15ರ ರಾತ್ರಿ ಮನೆಯಲ್ಲಿ ರೇಷ್ಮಾ ಅವರು ಜೀವಾಂತ್ಯ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಪುತ್ತೂರು ನಗರ ಠಾಣಾ ಪೊಲೀಸರು ಸ್ಥಳಕ್ಕೆ ದೌಡಾಯಿಸಿ, ಪರಿಶೀಲನೆ ನಡೆಸಿ ಮಹಜರು ಸಿದ್ಧಪಡಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತನಿಖೆಯಿಂದ ತಿಳಿದುಬರಬೇಕಿದೆ.

ಮೃತರು ಪತಿ ಚಿಂತನ್ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಚಿಂತನ್ ಅವರು ಇತ್ತೀಚೆಗೆ ನಡೆದ ನಗರಸಭಾ ಚುನಾವಣೆಯಲ್ಲಿ ನೆಲ್ಲಿಕಟ್ಟೆ ವಾರ್ಡ್‌ನಿಂದ ಪುತ್ತಿಲ ಪರಿವಾರದ ಬೆಂಬಲಿತ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಸ್ಥಳೀಯವಾಗಿ ಗುರುತಿಸಿಕೊಂಡಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಸ್ಮಶಾನದ ಪೊದೆಯಲ್ಲಿ ಸಿಕ್ಕಿಬಿದ್ದ ಬಿಜೆಪಿ ನಾಯಕ! ಚಡ್ಡಿ ಸರಿಪಡಿಸುತ್ತಾ ಮಹಿಳೆ ಜೊತೆ ಕಾರಿನಿಂದ ಇಳಿದು ಹೊರಬಂದ!!

ಲಕ್ನೋ: ಉತ್ತರ ಪ್ರದೇಶದಿಂದ ನಾಚಿಕೆಗೇಡಿನ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲಲ್…