pashupathi
ಅಪರಾಧ

ಪ್ರೀತಿಸಿ ಮದುವೆಯಾದ ಮಗಳನ್ನೇ ಕಿಡ್ನಾಪ್ ಮಾಡಿದ ಪೋಷಕರು..!!

tv clinic
ಪ್ರೀತಿಸಿ ಮದುವೆಯಾಗಿದ್ದ ಯುವತಿಯನ್ನು ಪತಿ ಮನೆಯಿಂದ ಬಲವಂತವಾಗಿ ಪೋಷಕರು ಕೊಂಡೊಯ್ದ ಘಟನೆ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪ್ರೀತಿಸಿ ಮದುವೆಯಾಗಿದ್ದ ಯುವತಿಯನ್ನು ಪತಿ ಮನೆಯಿಂದ ಬಲವಂತವಾಗಿ ಪೋಷಕರು ಕೊಂಡೊಯ್ದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

akshaya college

ಹುಬ್ಬಳ್ಳಿಯ ಬೈರಿಕೊಪ್ಪ ಗ್ರಾಮದ ನಿರಂಜನ್‌ ಹಾಗೂ ಸುಷ್ಕಾರ ಪರಸ್ಪರ ಪ್ರೀತಿಗೆ ಹೆತ್ತವರ ವಿರೋಧವಿತ್ತು. ಕಳೆದ ಎಂಟು ವರ್ಷದಿಂದ ಇವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಅಲ್ಲದೇ ಈ ಜೋಡಿ 2 ವರ್ಷದ ಹಿಂದೆಯೇ ಗದಗನಲ್ಲಿ ರಿಜಿಸ್ಟರ್ ಮ್ಯಾರೇಜ್ ಆಗಿ ಬಂದಿದ್ದರು.

ಬಳಿಕ ಪೋಷಕರ ವಿರೋಧಕ್ಕೆ ಮಣಿದು, ಇಬ್ಬರು ದೂರವಾಗಿ ವೇದನೆ ಪಡುತ್ತಿದ್ದರು ಎನ್ನಲಾಗಿದೆ. ಇದೀಗ ಪ್ರೀತಿಸಿ ಮದುವೆಯಾದ ಪತಿಯನ್ನು ಬಿಟ್ಟಿರಲು ಸಾಧ್ಯವಿಲ್ಲ ಎಂದು ನಿರಂಜನ್ ಮನೆಗೆ ಸುಷ್ಮಾ ಬಂದಿದ್ದರು. ಈ ವೇಳೆ ಯುವತಿ ತಂದೆ ಪರಶುರಾಮ, ಮಾವಂದಿರಾದ ಮಹಾಂತೇಶ್‌, ಮಂಜು ಸೇರಿ ನಿರಂಜನ್‌ಗೆ ಧಮ್ಮಿ ಹಾಕಿ ಗಂಡನ ಮನೆಯಲ್ಲಿ ಕುಳಿತಿದ್ದ ಸುಷ್ಮಾಳನ್ನು ಗೋಣಿ ಚೀಲದಲ್ಲಿ ಬಲವಂತವಾಗಿ ಕೊಂಡೊಯ್ದಿದ್ದಾರೆ.ಸುಷ್ಮಾ ತಂಟೆಗೆ ಬಂದರೆ ನಿನ್ನನ್ನು ಸುಮ್ಮನೆ ಬಿಡುವುದಿಲ್ಲ ಎಂದು ಪತಿ ನಿರಂಜನ್ ಗೆ ಕುಟುಂಬಸ್ಥರು ಧಮ್ಮಿ ಹಾಕಿದ್ದಾರೆ. ಸದ್ಯ ಈ ಜೋಡಿ ರಕ್ಷಣೆಗಾಗಿ ಹುಬ್ಬಳ್ಳಿಯ ಪೊಲೀಸರ ಮೊರೆ ಹೋಗಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts