ತಡರಾತ್ರಿ ಮನೆಯೊಂದಕ್ಕೆ ಕಳ್ಳರು ನುಗ್ಗಿ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ವಿಟ್ಲ ಸಮೀಪದ ಉಕ್ಕುಡದಲ್ಲಿ ನಡೆದಿದೆ.
ಅನಂತೇಶ್ವರ ದೇವಸ್ಥಾನದ ಪ್ರದಾನ ಅರ್ಚಕ ಉಕ್ಕುಡ ನಿವಾಸಿ ರಜತ್ ಭಟ್‌ರವರ ಮನೆಯಲ್ಲಿ ಕಳ್ಳತನ ನಡೆದಿದೆ. ರಜತ್ ಭಟ್ ತನ್ನ ಹೆಂಡತಿ ಮತ್ತು 2 ಮಕ್ಕಳೊಂದಿಗೆ ವಾಸವಾಗಿದ್ದರು.
ಮನೆಯಲ್ಲಿ ಯಾರೂ ಇಲ್ಲದ ವೇಳೆ ತಡರಾತ್ರಿ ಮನೆಗೆ ನುಗ್ಗಿದ ಖದೀಮರು ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ. ಘಟನೆಯಲ್ಲಿ ಕಿವಿ ಓಲೆ ಮತ್ತು ಸರ ದೋಚಿ ಪರಾರಿಯಾಗಿದ್ದು ఓట్ను ಎರಡು ಪವನ್ ಕಳ್ಳತನವಾಗಿದೆ ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ. ಘಟನೆ ಕಿವಿ ಓಲೆ ಮತ್ತು ಸರವನ್ನು ದೋಚಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
ಕರಾವಳಿಯಾದ್ಯಂತ ಇತ್ತೀಚೆಗೆ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಡಕ್ ಪೊಲೀಸ್ ಅಧಿಕಾರಿಗಳ ನೇಮಕವಾಗಿದೆ. ಈ ನಿಟ್ಟಿನಲ್ಲಿ ಪೊಲೀಸರು ತಮ್ಮ ಕರ್ತವ್ಯವನ್ನು ಬಹಳ ಉತ್ತಮವಾಗಿ ನಿಭಾಯಿಸುತ್ತಿದ್ದಾರೆ. ಆದರೆ ಕಳ್ಳರ ಹಾವಳಿ ಇತ್ತೀಚೆಗೆ ಜೋರಾಗಿದ್ದು ಕೇರಳ ಗಡಿ ಭಾಗದಲ್ಲಿ ಬಹಳಷ್ಟು ಪ್ರಕರಣಗಳು ನಡೆದಿದೆ. ಇದನ್ನು ಪೊಲೀಸ್ ಇಲಾಖೆ ಗಮನಿಸಿ ಕಳ್ಳರ ಹೆಡೆಮಮುರಿ ಕಟ್ಟುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.