tamanvi
ಅಪರಾಧ

ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ: ಯುವತಿ ಗರ್ಭಿಣಿ, ಪ್ರಕರಣ ದಾಖಲು!!

ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ಯುವತಿಯನ್ನು ಗರ್ಭವತಿಯನ್ನಾಗಿಸಿದ ಹಿನ್ನಲೆಯಲ್ಲಿ ಯುವತಿ ನೀಡಿದ ದೂರಿನನ್ವಯ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ಯುವತಿಯನ್ನು ಗರ್ಭವತಿಯನ್ನಾಗಿಸಿದ ಹಿನ್ನಲೆಯಲ್ಲಿ ಯುವತಿ ನೀಡಿದ ದೂರಿನನ್ವಯ ಪುತ್ತೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಪ್ಪಳಿಗೆ ನಿವಾಸಿ ಕೃಷ್ಣ ವಿರುದ್ಧ ಪ್ರಕರಣ ದಾಖಲಾಗಿದೆ.

ಸ್ನೇಹಿತರಾಗಿದ್ದ ಇಬ್ಬರಿಗೂ ಹೈ ಸ್ಕೂಲ್ ನಿಂದಲೇ ಪರಿಚಯವಿದ್ದು ಬಳಿಕ ಪರಸ್ಪರ ಪ್ರೀತಿಸುತ್ತಿದ್ದು 2024 ರ ಅಕ್ಟೋಬರ್ ತಿಂಗಳಲ್ಲಿ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಮನೆಗೆ ಬರ ಹೇಳಿ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿದ್ದಾನೆ.

ಬಳಿಕ 2025 ಜನವರಿಯಲ್ಲಿ ಮನೆಗೆ ಬರಲು ಹೇಳಿ ಮತ್ತೆ ಬಲವಂತವಾಗಿ ದೈಹಿಕ ಸಂಪರ್ಕ ಮಾಡಿರುತ್ತಾನೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.

ಬಳಿಕ ಮುಂದಿನ ದಿನಗಳಲ್ಲಿ ಅನುಮಾನ ಗೊಂಡು ಆತನಲ್ಲಿ ತಿಳಿಸಿದಾಗ ಮಂಗಳೂರಿನ ಕ್ಲಿನಿಕ್ ನಲ್ಲಿ ಪರೀಕ್ಷೆಗೊಳಪಡಿಸಿದಾಗ 7.1/2 ತಿಂಗಳ ಗರ್ಭಿಣಿಯಾಗಿರುವ ವಿಚಾರ ತಿಳಿದು ಬಂದಿದ್ದು ಆಗಲೂ ಆತ ಮದುವೆಯಾಗುವುದಾಗಿ ನಂಬಿಸಿದ್ದ ಎಂದೂ, ಆತನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಯುವತಿ ದೂರಿನಲ್ಲಿ ತಿಳಿಸಿದ್ದಾಳೆ ಎಂದು ತಿಳಿದು ಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

1 of 119