tamanvi
ಅಪರಾಧ

ಅಕ್ಷಯ್ ಕಲ್ಲೇಗ ಕೊಲೆ ಆರೋಪಿಗೆ ಜೈಲಿನಲ್ಲಿ ಹಲ್ಲೆ: ಆಸ್ಪತ್ರೆ..!!

ಕಾರಾಗೃಹದಲ್ಲಿ ಕೈದಿಗಳ ನಡುವೆ ಹೊಡೆದಾಟ ನಡೆದಿದೆ. ಗುರುವಾರ (ಜೂ.26) ಜೈಲಿನ ಒಳಗಡೆ ಕೈದಿಗಳು ಪರಸ್ಪರ ಹೊಡೆದಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಮಂಗಳೂರಿನ ಕೊಡಿಯಾಲ್ ಬೈಲಿನ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಕೈದಿಗಳ ನಡುವೆ ಹೊಡೆದಾಟ ನಡೆದಿದೆ. ಗುರುವಾರ (ಜೂ.26) ಜೈಲಿನ ಒಳಗಡೆ ಕೈದಿಗಳು ಪರಸ್ಪರ ಹೊಡೆದಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

2023ರ ನ.6ರಂದು ತಡರಾತ್ರಿ ಪುತ್ತೂರಿನ ನೆಹರೂನಗರದಲ್ಲಿ ನಡೆದ ಟೀಮ್ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರ ಕೊಲೆ ಪ್ರಕರಣದ ಆರೋಪಿ ಕೇಶವ ಪಡೀಲ್‌ಗೆ ಮಂಗಳೂರು ಜೈಲಿನಲ್ಲಿ ಹಲ್ಲೆ ನಡೆಸಲಾಗಿದೆ ಎಂದು ವರದಿಯಾಗಿದೆ.

ಮುಖಾ‌ರ್ ಹಾಗೂ ಇತರೆ ಕೈದಿಗಳ ಮಧ್ಯೆ ಗಲಾಟೆಯಾಗಿದೆ. ಮುಖಾ‌ರ್ ಮತ್ತೊಬ್ಬ ಕೈದಿ ಕೇಶವ ಎಂಬಾತನ ಮೇಲೆ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಕೇಶವನನ್ನು ವೆನ್ಸಾಕ್ ಆಸ್ಪತ್ರೆಗೆ ಪೊಲೀಸರು ದಾಖಲಿಸಿದ್ದಾರೆ.

ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೈಲಿಗೆ ಬರ್ಕೆ ಠಾಣೆ ಪೊಲೀಸರು ಹಾಗೂ ಎಸಿಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮನೆಗೆ ಬಿಡುವುದಾಗಿ ಬೈಕ್‌ನಲ್ಲಿ ಕರೆತಂದು ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೋ ಪ್ರಕರಣ ದಾಖಲು

ಮಂಗಳೂರು: ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅಪ್ರಾಪ್ತ ಬಾಲಕಿಯನ್ನು ಮನೆಗೆ ಬಿಡುವುದಾಗಿ…

1 of 119