ಅಪರಾಧ

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಬ್ಯಾಂಕ್ ಖಾತೆ ವಿವರದಲ್ಲಿ ಸ್ಫೋಟಕ ಅಂಶ ಪತ್ತೆ!

ಮಂಗಳೂರಿನಲ್ಲಿ ನಡುರಸ್ತೆಯಲ್ಲಿಯೇ ರೌಡಿಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಇದೀಗ ಪೊಲೀಸರು ಆರೋಪಿಗಳನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ತನಿಖೆ ವೇಳೆ ಸ್ಫೋಟಕ ಅಂಶ ಒಂದು ಬಯಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

akshaya college

ಹೌದು, ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಎನ್ ಐಎ ತನಿಖೆಯ ವೇಳೆ ಹತ್ಯೆ ಆರೋಪಿಗಳಿಗೆ ನಿಷೇಧಿತ ಪಿಎಫ್ ಐ ಜೊತೆ ನಂಟಿತ್ತು ಎಂಬ ಬಗ್ಗೆ ಸಾಕ್ಷ್ಯ ಲಭ್ಯವಗಿದೆ.

ಕೇಸ್ ನಲ್ಲಿ ಬಂಧಿತರ ಬ್ಯಾಂಕ್ ಖಾತೆಗಳಿಗೆ ಹಣ ಹೋಗಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಎನ್ ಐಎ ತಂಡ ಫಂಡಿಂಗ್ ಪಾಯಿಂಟ್ ತನಿಖೆಗೆ ಇಳಿದಿದೆ. ಬಂಧಿತ ಆರೋಪಿಗಳ ಬ್ಯಾಂಕ್ ಖಾತೆಗಳಿಗೆ ವಿದೇಶಿ ಫಂಡಿಂಗ್ ಬಗ್ಗೆ ಪತ್ತೆಯಾಗಿದ್ದು, 12 ಆರೋಪಿಗಳ ಬ್ಯಾಂಕ್ ಖಾತೆ ವಿವರವನ್ನು ತನಿಖಾ ತಂಡ ಸಂಗ್ರಹಿಸಿದೆ ಎಂದು ತಿಳಿದುಬಂದಿದೆ

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts