ಹೆರಿಗೆಯಾದ ಶಿಶುವನ್ನೇ ಅದಲು-ಬದಲು ಮಾಡಿದ್ದಾರೆ ಎಂದು ಪೋಷಕರು ಆರೋಪ ಮಾಡಿರುವ ಘಟನೆ ರಾಯಚೂರು ಸಿಂಧನೂರು ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
ಗಂಡು ಮಗು ಕೊಟ್ಟು ಬಳಿಕ ಹೆಣ್ಣು ಹುಟ್ಟಿದೆ ಎಂದು ಆಸ್ಪತ್ರೆ ಸಿಬ್ಬಂದಿ ಹೇಳಿದ್ದಾರೆ. ಬಾಣಂತಿ ರೇವತಿ ಎಂಬುವವರು ಗಂಡು ಮಗುವಿಗೆ ಜನ್ಮ ನೀಡಿದ್ದರು. ಮೊದಲು ತಾಯಿಗೆ ಗಂಡು ಮಗುವನ್ನ ಕೊಟ್ಟು ಹಾಲು ಉಣಿಸಲು ಹೇಳಿದ್ದ ಸಿಬ್ಬಂದಿ, ಬಳಿಕ ನಮ್ಮಿಂದ ತಪ್ಪಾಗಿದೆ ನಿಮಗೆ ಹುಟ್ಟಿರುವುದು ಹೆಣ್ಣು ಮಗು ಎಂದಿದ್ದಾರೆ. ಸಿಬ್ಬಂದಿ ನಡೆ ಬಗ್ಗೆ ಅನುಮಾನಗೊಂಡ ಪೋಷಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಈ ಮಗುವನ್ನು ಸಿಬ್ಬಂದಿ ಬದಲಾವಣೆ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಇದರಿಂದಾಗಿ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸದ್ಯ ಸಿಂಧನೂರು ನಗರ ಪೊಲೀಸ್ ಠಾಣೆಗೆ ಕುಟುಂಬಸ್ಥರು ದೂರು ನೀಡಿದ್ದಾರೆ.