ಪುತ್ತೂರು: ನೆಹರೂನಗರದಲ್ಲಿ ಅಪ್ರಾಪ್ತ ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಆರೋಪಿಯನ್ನು ಕಬಕ ನಿವಾಸಿ ನವೀನ್’ಚಂದ್ರ (49) ಎಂದು ಗುರುತಿಸಲಾಗಿದೆ.
ಜುಲೈ 8ರಂದು ಬಾಲಕಿಯು ತಾಯಿಯೊಂದಿಗೆ ನೆಹರುನಗರ ಜಂಕ್ಷನ್’ನಲ್ಲಿ ಬಸ್ ಗಾಗಿ ಕಾಯುತ್ತಿದ್ದಾಗ ಅಪರಿಚಿತ ವ್ಯಕ್ತಿಯೋರ್ವ ಬಾಲಕಿ ಜೊತೆ ಅನುಚಿತವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿ ಹಲ್ಲೆ ನಡೆಸಿರುತ್ತಾನೆ ಎಂದು ದೂರಲಾಗಿದೆ.
ಸಂತ್ರಸ್ತೆಯ ತಾಯಿ ನೀಡಿದ ದೂರಿನ ಮೇರೆಗೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಅಕ್ರ: 53/2025 ಕಲಂ: 126(2), 74, 115(2), 353(2) BNS 2023, 8 POCSO 2012ರಡಿ ಪ್ರಕರಣ ದಾಖಲಿಸಲಾಗಿದೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.