ಅಪರಾಧ

ಗರುಡ ಗ್ಯಾಂಗ್‌ನ  ಆರೋಪಿ ಕಬೀರ್ ಬಂಧನ..!

ಈ ಸುದ್ದಿಯನ್ನು ಶೇರ್ ಮಾಡಿ

ಉಡುಪಿ: ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಗರುಡ ಗ್ಯಾಂಗ್‌ನ ಕುಖ್ಯಾತ ಆರೋಪಿ ಕಾರ್ಕಳದ ಕಂಪನ ಕೌಡೂರು ಗ್ರಾಮದ ಕಬೀ‌ರ್ ಅಲಿಯಾಸ್ ಕಬೀರ್ ಹುಸೇನ್‌ (46)ನನ್ನು ಗೂಂಡಾ ಕಾಯ್ದೆ ಅಡಿ ಉಡುಪಿ ಪೊಲೀಸರು ಬಂಧಿಸಿದ್ದಾರೆ.

akshaya college

ಕಬೀರ್ 2005ರಿಂದ ಅಪರಾಧ ಚಟುವಟಿಕೆಗಳಲ್ಲಿ ತೊಡಗಿದ್ದು, ಕೊಲೆ, ಕೊಲೆ ಯತ್ನ, ದರೋಡೆ, ಸುಲಿಗೆ, ಕಳ್ಳತನ, ಜಾನುವಾರು ಕಳವು, ಸರಕಾರಿ ಅಧಿಕಾರಿಗಳ ಮೇಲೆ ಹಲ್ಲೆ ಮುಂತಾದ 17 ಪ್ರಕರಣಗಳಲ್ಲಿ ಭಾಗಿಯಾಗಿರುತ್ತಾನೆ. ಇವುಗಳ ಪೈಕಿ ಈಗಾಗಲೇ ಎರಡು ಪ್ರಕರಣಗಳಲ್ಲಿ ಅಪರಾಧಿ ಎಂದು ಸಾಬೀತಾಗಿದ್ದು, 8 ಪ್ರಕರಣಗಳಲ್ಲಿ ನಿರ್ದೋಷಿ ಎಂದು ಬಿಡುಗಡೆಯಾಗಿದ್ದಾನೆ. ಇನ್ನು ಮೂರು ಪ್ರಕರಣಗಳಲ್ಲಿ ರಾಜಿ ಮಾಡಿಕೊಂಡಿರುತ್ತಾನೆ. ಎರಡು ಪ್ರಕರಣಗಳು ನ್ಯಾಯಾಂಗ ವಿಚಾರಣೆಯಲ್ಲಿವೆ ಮತ್ತು ಉಳಿದ ಎರಡು ಪ್ರಕರಣಗಳು ಪೊಲೀಸ್‌ ತನಿಖೆಯಲ್ಲಿವೆ.

ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿಗಳು ಕರ್ನಾಟಕ ಗೂಂಡಾ ಕಾಯಿದೆ (ಕರ್ನಾಟಕ ಅಕ್ರಮ ಮದ್ಯ ಮಾರಾಟಗಾರರು, ಮಾದಕ ವಸ್ತು ಅಪರಾಧಿಗಳು, ಜೂಜುಕೋರರು, ಗೂಂಡಾಗಳು ಇತ್ಯಾದಿಗಳ ಅಪಾಯಕಾರಿ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯಿದೆ) ಅಡಿಯಲ್ಲಿ ಕಬೀ‌ರ್ ವಿರುದ್ಧ ತಡೆಗಟ್ಟುವ ಬಂಧನ ಆದೇಶವನ್ನು ಹೊರಡಿಸಿದ್ದರು.

ಉಡುಪಿ ಜಿಲ್ಲಾಧಿಕಾರಿಗಳ ಆದೇಶದ ಹಿನ್ನೆಲೆಯಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ಮೈಸೂರಿನ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ. ಆರೋಪಿಯು ಉಡುಪಿ ಜಿಲ್ಲೆಯ ಕಾರ್ಕಳ ನಗರ, ಹಿರಿಯಡ್ಕ, ಪಡುಬಿದ್ರಿ, ಮಣಿಪಾಲ, ಶಿರ್ವ, ಕಾಪು ಠಾಣೆಗಳ ಪ್ರಕರಣಗಳಲ್ಲಿ ಭಾಗಿಯಾಗಿರುತ್ತಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಉಡುಪಿ ಜಿಲ್ಲೆಯಲ್ಲಿ ಮಾತ್ರವಲ್ಲದೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮತ್ತು ಕೊಪ್ಪ, ದಕ್ಷಿಣ ಕನ್ನಡ ಜಿಲ್ಲೆಯ ವೇಣೂರು, ಮಂಗಳೂರು ನಗರ ವ್ಯಾಪ್ತಿಯ ಸುರತ್ಕಲ್ ಠಾಣೆಯ ಪ್ರಕರಣಗಳಲ್ಲೂ ಭಾಗಿಯಾಗಿರುತ್ತಾನೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರು ತಹಸೀಲ್ದಾರ್ ಕಚೇರಿಗೆ ಲೋಕಾಯುಕ್ತ ದಾಳಿ!! ಬಲೆಗೆ ಬಿದ್ದ ಎಫ್‌ಡಿಎ ಸುನೀಲ್, ತಲೆಮರೆಸಿಕೊಂಡ ತಹಸೀಲ್ದಾರ್!!

ಪುತ್ತೂರು: ತಾಲೂಕಿನ ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯ ಭೂ ಸುಧಾರಣಾ ಶಾಖೆಯ ಎಫ್.ಡಿ.ಎ…

ಪೆರ್ನಾಜೆ ಬಳಿ ಬಸ್ – ಕಾರು ಅಪಘಾತ! ರಸ್ತೆಯಲ್ಲಿ ಚೆಲ್ಲಿದ್ದ ತೈಲಕ್ಕೆ ಜಾರಿದ ಕೆವಿಜಿ ನಿವೃತ್ತ ಪ್ರಾಂಶುಪಾಲರಿದ್ದ ಕಾರು!!

ಪುತ್ತೂರು: ಸುಳ್ಯದಿಂದ ಪುತ್ತೂರಿಗೆ ಆಗಮಿಸುತ್ತಿದ್ದ ಕಾರು ಹಾಗೂ ಮೈಸೂರು ಕಡೆ ತೆರಳುತ್ತಿದ್ದ…