ಅಪರಾಧ

ಹೆಡ್ ಕಾನ್‌ಸ್ಟೇಬಲ್ ನೇಣುಬಿಗಿದು ಆತ್ಮಹತ್ಯೆ!!

GL

ಈ ಸುದ್ದಿಯನ್ನು ಶೇರ್ ಮಾಡಿ

ಕ್ವಾಟ್ರಸ್ ನಲ್ಲೆ ಹೆಡ್ ಕಾನ್‌ಸ್ಟೇಬಲ್‌ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಂದು ಶುಕ್ರವಾರ (ಜು.18) ನಡೆದಿದೆ.

chennai-shopping
maithri

ಕಾಂತರಾಜ್ (45) ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ.

ತರೀಕೆರೆ ತಾಲೂಕಿನ ಸುಣ್ಣದಹಳ್ಳಿ ಮೂಲದವರಾದ ಕಾಂತರಾಜ್ ಚಿಕ್ಕಮಗಳೂರು ಎಸ್ಪಿ ಕಚೇರಿಯಲ್ಲಿ ಕಂಪ್ಯೂಟರ್ ಸೆಕ್ಷನ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಈ ಹಿಂದೆ ನಡೆದ ಅಪಘಾತವೊಂದರಲ್ಲಿ ಕಾಂತರಾಜು ತನ್ನ ಬಲಗಾಲು ಕಳೆದುಕೊಂಡಿದ್ದು ಕೃತಕ ಕಾಲು ಜೋಡಣೆ ಮೂಲಕ ಕೆಲಸ ಮಾಡುತ್ತಿದ್ದರು. ಅಲ್ಲದೆ ಅಪಘಾತದಲ್ಲಿ ಕಾಲು ಕಳೆದುಕೊಂಡಾಗಿನಿಂದ ಕಾಂತರಾಜ್ ಮಾನಸಿಕ ಖಿನ್ನತೆಗೊಳಗಾಗಿದ್ದರು ಎಂದು ಹೇಳಲಾಗಿದೆ.

ಈ ನಡುವೆ ಕುಟುಂಬ ಸದಸ್ಯರು ಊರಿಗೆ ತೆರಳಿದ ವೇಳೆ ಕ್ವಾಟ್ರಸ್ ನಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ,

ಕಾಂತರಾಜ್ ಈ ಹಿಂದೆ ಎ.ಎನ್.ಎಫ್. ಹಾಗೂ ಕಳಸ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು ಎನ್ನಲಾಗಿದೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 105