ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಗಂಭೀರ ಚರ್ಚೆಗಳಾಗುತ್ತಿದ್ದರೆ, ಇತ್ತ ಅಧಿಕಾರಿಯೊಬ್ಬರು ಮೊಬೈಲ್‌ನಲ್ಲಿ ರಮ್ಮಿ ಆಡುತ್ತಿದ್ದ ದೃಶ್ಯ ಸೆರೆಯಾಗಿದೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರವೀಣ ಮೊಬೈಲ್‌ನಲ್ಲಿ ರಮ್ಮಿ ಆಟದಲ್ಲಿ ಮಗ್ನವಾಗಿದ್ದರು.
ಇದು ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಗಮನಕ್ಕೆ ಬರುತ್ತಿದ್ದಂತೆ ಅಧಿಕಾರಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಅಲ್ಲದೇ ಸಭೆಯಿಂದ ಹೊರಗೆ ಕಳುಹಿಸಿದ್ದಲ್ಲದೇ, ಅಧಿಕಾರಿ ವಿರುದ್ಧ ನೋಟಿಸ್ ಜಾರಿ ಮಾಡುವಂತೆ ಡಿಸಿಗೆ ಸೂಚನೆ ನೀಡಿದರು.