ಅಪರಾಧ

ಎಸ್.ಐ.ಟಿ ತನಿಖೆ ಉತ್ತಮ ನಿರ್ಧಾರ: ಶ್ರೀ ಕ್ಷೇತ್ರ ಧರ್ಮಸ್ಥಳದ ವಕ್ತಾರ ಕೆ. ಪಾರ್ಶ್ವನಾಥ నా

ಈ ಸುದ್ದಿಯನ್ನು ಶೇರ್ ಮಾಡಿ

ಧರ್ಮಸ್ಥಳ: “ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಶವಗಳನ್ನು ಹೂತಿದ್ದೇನೆ” ಎಂಬ ಗಂಭೀರ ಆರೋಪದ ಕುರಿತು ಒಬ್ಬ ವ್ಯಕ್ತಿ ನೀಡಿದ ದೂರಿನಂತೆ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್‌.ಐ.ಟಿ (ವಿಶೇಷ ತನಿಖಾ ತಂಡ)ಗೆ ಹಸ್ತಾಂತರಿಸಿರುವುದನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ವಕ್ತಾರ ಕೆ. ಪಾರ್ಶ್ವನಾಥ ಜೈನ್ ಅವರು ಸ್ವಾಗತಿಸಿದ್ದಾರೆ.

akshaya college

ಅವರು ನೀಡಿರುವ ಪತ್ರಿಕಾ ಪ್ರಕಟಣೆಯಲ್ಲಿ ಈ ಪ್ರಕರಣವು ಇತ್ತೀಚೆಗೆ ರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ತರ್ಕವಾತರ್ಕಗಳು ಹಾಗೂ ಗೊಂದಲಗಳಿಗೆ ಕಾರಣವಾಗಿದೆ ಎಂದು ಅವರು ತಿಳಿಸಿದ್ದಾರೆ.

“ಸಾಮಾಜಿಕ ನೈತಿಕತೆ ಹಾಗೂ ಶ್ರದ್ಧೆಗೆ ನಿಲುಕುವ ಬಲವಾದ ಆಧಾರವೆಂದರೆ ಸತ್ಯ ಈ ಹಿನ್ನೆಲೆಯಲ್ಲಿ ಎಸ್.ಐ.ಟಿ. ಪ್ರಾಮಾಣಿಕ ತನಿಖೆ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸಬೇಕೆಂಬುದು ನಮ್ಮ ಆಶಯ” ಎಂದು ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts