ಬೆಂಗಳೂರು: ಭಯೋತ್ಪಾದನಾ ಚಟುವಟಿಕೆ ಹಾಗೂ ಭಯೋತ್ಪಾದಕರಿಗೆ ಬೆಂಬಲ ನೀಡಿದ ಆರೋಪದಡಿ ನಗರದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಮಹಿಳೆಯನ್ನು ಗುಜರಾತ್‌ನ ಭಯೋತ್ಪಾದನಾ ನಿಗ್ರಹ ದಳದ ಅಧಿಕಾರಿಗಳು ನಗರದಲ್ಲಿ ಬಂಧಿಸಿದ್ದಾರೆ
ಭಯೋತ್ಪಾದನಾ ಚಟುವಟಿಕೆಗಳಿಗೆ ಬೆಂಬಲಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳನ್ನು ಹಾಕುತ್ತಿದ್ದ ಹಾಗೂ ಉಗ್ರ ಚಟುವಟಿಕೆಗೆ ಪ್ರೇರೇಪಣೆ ನೀಡುತ್ತಿದ್ದ ಆರೋಪದಡಿ ಬಂಧಿಸಲಾಗಿದೆ. ಯುಎಲ್‌ಎಫ್‌ಎ ಸಂಘಟನೆ ಜತೆಗೆ ಮಹಿಳೆ ಗುರುತಿಸಿಕೊಂಡಿದ್ದಳು ಎಂದು ಮೂಲಗಳು ತಿಳಿಸಿವೆ.
ಸ್ಥಳೀಯವಾಗಿ ಯಾರಾದರೂ ಶಂಕಿತ ಮಹಿಳೆಯ ಜತೆಗೆ ಗುರುತಿಸಿಕೊಂಡಿದ್ದರೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಜಾರ್ಖಂಡ್ ಮೂಲದ ಶಮಾ ಪರ್ವೀನ್ ಬಂಧಿತ ಮಹಿಳೆ.
ಹೆಬ್ಬಾಳದ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸಹೋದರನ ಮನೆಯಲ್ಲಿ ಶಮಾ ಪರ್ವೀನ್ ನೆಲಸಿದ್ದಳು. ಆಕೆ ಎಲ್ಲಿಯೂ ಕೆಲಸಕ್ಕೆ ಹೋಗುತ್ತಿರಲಿಲ್ಲ. ಸಹೋದರನ ಮನೆಯಲ್ಲೇ ಕಾಲಕಳೆಯುತ್ತಿದ್ದಳು ಎಂದು ಮೂಲಗಳು ತಿಳಿಸಿವೆ.
ಬೆಂಗಳೂರಿನ ನ್ಯಾಯಾಲಯದ ನ್ಯಾಯಾಧೀಶರ ಎದುರು ಶಂಕಿತ ಮಹಿಳೆಯನ್ನು ಅಧಿಕಾರಿಗಳು ಹಾಜರು ಪಡಿಸಿದ್ದರು. ಬಳಿಕ ಪ್ರಕರಣ ವರ್ಗಾವಣೆ ಆದೇಶ ಪಡೆದುಕೊಂಡು ಶಂಕಿತೆಯನ್ನು ಗುಜರಾತ್‌ಗೆ ಕರೆದೊಯ್ದಿದ್ದಾರೆ ಎಂದು ಮೂಲಗಳು ತಿಳಿಸಿವೆ.