ಧರ್ಮಸ್ಥಳ: ಕಳೆದ ಮೂರು ದಿನಗಳಿಂದ ಶವ ಹೂತಿಟ್ಟ ಸ್ಥಳದಲ್ಲಿ ಉತ್ಖನನ ನಡೆಸುತ್ತಿದ್ದು, ಜು.31ರಂದು ಶವದ ಅವಶೇಷ ಪತ್ತೆಯಾಗಿದೆ ಎಂದು ವರದಿಯಾಗಿದೆ.
ಕೆಲ ಮೂಳೆಗಳು ಪತ್ತೆಯಾಗಿದ್ದು, ವಿಧಿವಿಜ್ಞಾನ ಇಲಾಖಾ ಅಧಿಕಾರಗಳು ಅದನ್ನು ಸಂಗ್ರಹಿಸಿ, ಪರೀಕ್ಷೆಗೆ ಒಳಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.
ಧರ್ಮಸ್ಥಳ ಆಸುಪಾಸಿನಲ್ಲಿ ಹಲವು ಮೃತದೇಹಗಳನ್ನು ಹೂತು ಹಾಕಿಸಲಾಗಿದೆ ಎಂದು ಅನಾಮಿಕ ದೂರು ನೀಡಿದ್ದು, ಅದರಂತೆ ಎಸ್.ಐ.ಟಿ. ಅಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ.
ಇದೀಗ ಶವದ ಅವಶೇಷ, ಬುರುಡೆ ಪತ್ತೆಯಾಗಿದೆ ಎಂದು ಹೇಳಲಾಗಿದೆ. ಇದರ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.