ಅಪರಾಧ

ತಲವಾರು ಪ್ರದರ್ಶನದ ಸುಳ್ಳು ಮಾಹಿತಿ ಪ್ರಸಾರ: ಎಸ್.ಡಿ.ಪಿ.ಐ ಪುತ್ತೂರು ಅಧ್ಯಕ್ಷ ಅಶ್ರಫ್ ಬಾವು ವಿರುದ್ಧ ಪ್ರಕರಣ ದಾಖಲು!!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಬೊಳುವಾರಿನಲ್ಲಿ ವ್ಯಕ್ತಿಯೋರ್ವ ಜು.14ರಂದು ಸಾರ್ವಜನಿಕವಾಗಿ ತಲವಾರು ಪ್ರದರ್ಶಿಸಿದ ಘಟನೆಗೆ ಸಂಬಂಧಿಸಿದಂತೆ, “ನಾವು ಭಾರತೀಯ ಸೇನೆ” ಎಂಬ ಪೇಸ್ ಬುಕ್ ಪೇಜಿನಲ್ಲಿ ಸುಳ್ಳು ಮಾಹಿತಿ ಹರಡಿದ ಆರೋಪದಲ್ಲಿ ಎಸ್‌.ಡಿ.ಪಿ.ಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಅಶ್ರಫ್ ಬಾವು ವಿರುದ್ಧ ಪ್ರಕರಣ ದಾಖಲಾಗಿದೆ.

akshaya college

ಘಟನೆಯ ಬಗ್ಗೆ, ನೈಜತೆಯನ್ನು ಪರಿಶೀಲಿಸದೇ ಧರ್ಮಧರ್ಮಗಳ ನಡುವೆ ವೈಮನಸ್ಸು ಹಾಗೂ ದ್ವೇಷ ಉಂಟಾಗುವ ರೀತಿಯಲ್ಲಿ ಸುಳ್ಳು ಮಾಹಿತಿಯನ್ನು ಪ್ರಸಾರ ಮಾಡಿರುವ ಆರೋಪದಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ 5: 68/2025 : 240,353(2)BNS 2023. 0 ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts