ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾ ಪಂಚಾಯಿತಿಯ ಗುತ್ತಿಗೆ ಆಧಾರದ ಚಾಲಕ ಬಾಬು ಎಂ (33 ವರ್ಷ) ಎಂಬಾತ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇಂದು ಬೆಳ್ಳಂಬೆಳಗ್ಗೆ ಈ ಘಟನೆ ನಡೆದಿದೆ. ಇದನ್ನು ಕಂಡು ಇಡೀ ಜಿಲ್ಲೆಯಲ್ಲಿ ಆಘಾತ ಉಂಟಾಗಿದೆ.
ಘಟನೆಗೆ ಸಂಬಂಧಿಸಿದಂತೆ ಬಾಬು ಎಂ. ನಾಲ್ಕು ಪುಟಗಳ ಡೆತ್ ನೋಟ್ ಬರೆದಿಟ್ಟಿದ್ದಾರೆ. ಇದರಲ್ಲಿ ತಮ್ಮ ಸಾವಿಗೆ ಕಾರಣ ಮತ್ತು ಯಾರೆಲ್ಲಾ ಹೊಣೆ ಎಂಬುದನ್ನು ಸಂಕ್ಷಿಪ್ತವಾಗಿ ಉಲ್ಲೇಖಿ ಸಿದ್ದಾರೆ. ಡ್ರೈವರ್ ಬಾಬು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆವರಣದಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದು, ಹಲವು ಅನುಮಾನಕ್ಕೆ ಕಾರಣವಾಗಿದೆ.
ಪೊಲೀಸರು ಬಂದು ಪರಿಶೀಲನೆ ನಡೆಸಿದಾಗ ಬಾಬು ಬರೆದ ಡೆತ್‌ನೋಟ್ ಬಹಿರಂಗವಾಗಿದ್ದು, ಅದರಲ್ಲಿ ಪ್ರಭಾವಿಗಳ ಹೆಸರುಗಳನ್ನು ಉಲ್ಲೇಖ ಮಾಡಲಾಗಿದೆ. ಸಂಸದ ಡಾ. ಸುಧಾಕರ್ ಹೆಸರು ಇದೆ ಎಂದು ತಿಳಿದು ಬಂದಿದೆ.