tamanvi
ಅಪರಾಧ

ಧರ್ಮಸ್ಥಳ ಪ್ರಕರಣ: 6 ಆರೋಪಿಗಳ ಮೇಲೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣ ದಾಖಲು, ಬಂಧನ!

ಈ ಸುದ್ದಿಯನ್ನು ಶೇರ್ ಮಾಡಿ

ಧರ್ಮಸ್ಥಳದ ಪಾಂಗಳ ಕ್ರಾಸ್ ಬಳಿ ನಡೆದಿದ್ದ ಅಹಿತಕರ ಘಟನೆಗೆ ಸಂಬಂಧಪಟ್ಟಂತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಧರ್ಮಸ್ಥಳ ನಿವಾಸಿ ಪದ್ಮಪ್ರಸಾದ್ (32), ಧರ್ಮಸ್ಥಳ ನಿವಾಸಿ ಸುಹಾಸ್ (22), ಉಜಿರೆ ನಿವಾಸಿ ಖಲಂದರ್ ಪುತ್ತುಮೋನು (42), ಕಳೆಂಜ ನಿವಾಸಿ ಚೇತನ್ (21), ಧರ್ಮಸ್ಥಳ ನಿವಾಸಿ ಶಶಿಧರ್ (30), ಕಳ್ಮಂಜ ನಿವಾಸಿ ಗುರುಪ್ರಸಾದ್ (19) ಬಂಧಿತರು.

ಆಗಸ್ಟ್ 6ರಂದು ನಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳ ಮೇಲೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣವನ್ನು ಧರ್ಮಸ್ಥಳ ಠಾಣೆಯಲ್ಲಿ ದಾಖಲಿಸಲಾಗಿದೆ.

ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗಳಿಗೆ ಮಧ್ಯಂತರ ಜಾಮೀನು ನೀಡಿದೆ ಎಂದು ಹೇಳಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

1 of 119