pashupathi
ಅಪರಾಧ

ನಟ ದರ್ಶನ್ ಜಾಮೀನ್ ರದ್ದು! ಮತ್ತೆ ಡಿ ಗ್ಯಾಂಗ್ ಜೈಲುಪಾಲು??

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಹೊಸದಿಲ್ಲಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ ಏಳು ಆರೋಪಿಗಳ ಜಾಮೀನು ರದ್ದಾಗಿದೆ. ಸುಪ್ರೀಂ ಕೋರ್ಟ್ ಗುರುವಾರ (ಆ.14) ಜಾಮೀನು ರದ್ದು ಮಾಡಿ ಆದೇಶ ಪ್ರಕಟಿಸಿದೆ.

ಈ ಪ್ರಕರಣದಲ್ಲಿ ದರ್ಶನ್ ಮತ್ತು ಇತರ ಆರು ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿತ್ತು. ಆದರೆ, ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರದ ವಾದವನ್ನು ಪುರಸ್ಕರಿಸಿ, ಹೈಕೋರ್ಟ್‌ನ ಜಾಮೀನು ಆದೇಶವನ್ನು ರದ್ದುಗೊಳಿಸಿದೆ. 

ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ, ಹೈಕೋರ್ಟ್ ಜಾಮೀನು ನೀಡುವಾಗ ಸರಿಯಾದ ವಿವೇಚನೆಯನ್ನು ಬಳಸಿಲ್ಲ ಒಂದು ಹೊಸ ನಿರ್ದಿಷ್ಟ ರೂಪ ಅಭಿಪ್ರಾಯಪಟ್ಟಿದೆ. ಅಲ್ಲದೆ, ಸಾಕ್ಷ್ಯಗಳನ್ನು ಪರಿಶೀಲಿಸದೆ ಜಾಮೀನು ನೀಡಿರುವುದು ಸರಿಯಲ್ಲ ಎಂದು ಹೇಳಿದೆ. ಈ ಹಿನ್ನೆಲೆಯಲ್ಲಿ, ದರ್ಶನ್ ಮತ್ತು ಇತರ ಆರೋಪಿಗಳು ಮತ್ತೆ ಜೈಲು ವಾಸ ಅನುಭವಿಸಬೇಕಾಗಿದೆ. 


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts