tamanvi
ಅಪರಾಧ

ಆಸ್ಪತ್ರೆಯ ಶೌಚ ಗೃಹದಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ನವಜಾತ ಶಿಶುವಿನ ಮೃತ ದೇಹ ಪತ್ತೆ!!

ಈ ಸುದ್ದಿಯನ್ನು ಶೇರ್ ಮಾಡಿ

ಶಿವಮೊಗ್ಗ : ಮೆಗ್ಗಾನ್ ಆಸ್ಪತ್ರೆಯ ಶೌಚಾಲಯದಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿದೆ. ಮಗುವಿನ ಕತ್ತು ಸೀಳಿ ಹತ್ಯೆ ಮಾಡಲಾಗಿದೆ. ಮೆಗ್ಗಾನ್ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದ ಶೌಚಾಲಯದಲ್ಲಿ ಒಂದು ದಿನದ ಗಂಡು ಮಗುವಿನ ಮೃತದೇಹ ಸಿಕ್ಕಿದೆ.

ಮಗುವಿನ ಮೃತದೇಹ ಕಂಡು ಮೆಗ್ಗಾನ್ ಆಸ್ಪತ್ರೆಯ ಸ್ವಚ್ಛತಾ ಸಿಬ್ಬಂದಿ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಪರಿಶೀಲಿಸಿದಾಗ ಮಗುವಿನ ಕತ್ತು ಸೀಳಿರುವುದು ಗೊತ್ತಾಗಿದೆ. ವಿಷಯ ತಿಳಿಯುತ್ತಿದ್ದಂತೆ ದೊಡ್ಡಪೇಟೆ ಪೊಲೀಸರು, ತಜ್ಞರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಇನ್ನು, ಘಟನೆ ಸಂಬಂಧ ಮಹಿಳೆಯೊಬ್ಬಳನ್ನು ವಿಚಾರಣೆಗೆ ನಡೆಸುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

1 of 119