ಮಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನ ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರಾಜೀವ್ ಕುಲಾಲ್ ಅವರು ನೀಡಿದ ದೂರಿನ ಮೇರೆಗೆ ಬ್ರಹ್ಮಾವರ ಠಾಣೆಯಲ್ಲಿ BSN 196 (1), 352, 353 (2) ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಭಾರೀ ಹೈಡ್ರಾಮಾದ ಬಳಿಕ ಪೊಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. 8 ವಾಹನಗಳಲ್ಲಿ ತಿಮರೋಡಿ ನಿವಾಸಕ್ಕೆ ತೆರಳಿದ್ದ ಸುಮಾರು 30 ಪೊಲೀಸರ ತಂಡ ಉಜಿರಿಯಲ್ಲಿರುವ ಅವರ ಮನೆಯಲ್ಲೇ ವಶಕ್ಕೆ ಪಡೆದಿದೆ.
ಆ.16 ರಂಧು ಫೇಸ್ ಬುಕ್ ಪೇಜ್ ನಲ್ಲಿ ಮಹೇಶ ಶೆಟ್ಟಿ ತಿಮರೋಡಿಯು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ತೇಜೋವಧೆ ಮಾಡಿ ಹಿಂಧೂ ಧರ್ಮದ ನಾಯಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಅವಹೇಳನ ಮಾಡಿ ಬೇರೆ ಬೇರೆ ಧರ್ಮಗಳ ಹಾಗೂ ಸಮುದಾಯದ ನಡುವೆ ವೈಮನಸ್ಸಿನ ದ್ವೇ಼ಷ ಭಾವನೆಯನ್ನು ಉಂಟು ಮಾಡಿರುವ ಮಹೇಶ್ ಶೆಟ್ಟಿ ತಿಮರೋಡಿಯ ವಿರುದ್ಧ ಕಾನೂನು ಕ್ರಮಕ್ಕಾಗಿ ರಾಜೀವ ಕುಲಾಲ್, ಉಡುಪಿ ಗ್ರಾಮಾಂತರ ಬಿಜಿಪಿಯ ಮಂದಾಳತ್ವದಲ್ಲಿ ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 177/2025 US 196 (1), 352, 353(2) BNS ರಂತೆ ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.