ಪುತ್ತೂರು: ಸೌಜನ್ಯ ಪರ ಹೋರಾಟಗಾರರನ್ನು ಅವಹೇಳನಕಾರಿಯಾಗಿ ನಿಂದಿಸಿದ ರಾಕೇಶ್ ಶೆಟ್ಟಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಯವಂತೆ ಆಗ್ರಹಿಸಿ ಪುತ್ತೂರು ನಗರ ಠಾಣೆಗೆ ಮನವಿ ನೀಡಲಾಯಿತು.
ಮಾಧ್ಯಮ ಸಂದರ್ಶನವೊಂದರಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಗಿರೀಶ್ ಮಟ್ಟಣ್ಣನವರ್ ಅವರನ್ನು ಕೀಳಾಗಿ ನಿಂದಿಸಿದ ರಾಕೇಶ್ ಶೆಟ್ಟಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಪುತ್ತೂರು ಅಭಿನವ ಭಾರತ ಮಿತ್ರವೃಂದ ಹಾಗೂ ಮಹೇಶ್ ಶೆಟ್ಟಿ ಅಭಿಮಾನಿ ಬಳಗ ಆಗ್ರಹಿಸಿತು.
ಈ ಸಂದರ್ಭದಲ್ಲಿ ದಿನೇಶ್ ಕುಮಾರ್ ಜೈನ್, ಧನ್ಯ ಕುಮಾರ್ ಬೆಳಂದೂರು, ಹರಿಪ್ರಸಾದ್ ನೆಲ್ಲಿಕಟ್ಟೆ, ನವೀನ್ ರೈ ಬನ್ನೂರು, ಪುರುಷೋತ್ತಮ್ ಕೋಲ್ಪೆ, ಗಗನ್ ದೀಪ್ ಕರ್ಮಲ ಮೊದಲಾದವರು ಉಪಸ್ಥಿತರಿದ್ದರು.