ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೇನೆಂದು ಹೇಳಿ ಜನರಲ್ಲಿ ಭೀತಿ ಮೂಡಿಸಿದ್ದ ಮುಸುಕುಧಾರಿಯನ್ನು ಎಸ್.ಐ.ಟಿ. ಅಧಿಕಾರಿಗಳು ಬಂಧಿಸಿದ್ದಾರೆ.
ಮಾಹಿತಿಯ ಪ್ರಕಾರ, ಆಗಸ್ಟ್ 23ರ ಮುಂಜಾವಿನವರೆಗೂ ಮುಸುಕುಧಾರಿಯನ್ನು ಎಸ್.ಐ.ಟಿ. ನಿರಂತರ ವಿಚಾರಣೆ ನಡೆಸಿ ಬಳಿಕ ಬಂಧನಕ್ಕೆ ಒಳಪಡಿಸಲಾಗಿದೆ.
ಇಂದು (ಆ.23) ಬೆಳಗ್ಗೆ 11 ಗಂಟೆಗೆ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ತಿಳಿದುಬಂದಿದೆ.