ಅಪರಾಧ

ಪುತ್ತೂರು ತಹಸೀಲ್ದಾರ್ ಕಚೇರಿಗೆ ಲೋಕಾಯುಕ್ತ ದಾಳಿ!! ಬಲೆಗೆ ಬಿದ್ದ ಎಫ್‌ಡಿಎ ಸುನೀಲ್, ತಲೆಮರೆಸಿಕೊಂಡ ತಹಸೀಲ್ದಾರ್!!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ತಾಲೂಕಿನ ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯ ಭೂ ಸುಧಾರಣಾ ಶಾಖೆಯ ಎಫ್.ಡಿ.ಎ ಸುನೀಲ್, ದೂರುದಾರರಿಂದ ₹12,000 ಲಂಚ ಸ್ವೀಕರಿಸುತ್ತಿದ್ದ ವೇಳೆ ಮಂಗಳೂರು ಲೋಕಾಯುಕ್ತ ಪೊಲೀಸರ ಬಲೆಗೆ ಸಿಕ್ಕಿಬಿದ್ದಿದ್ದಾರೆ.

akshaya college

ಆಗಸ್ಟ್ 28ರಂದು ನಡೆದ ಈ ದಾಳಿ ವೇಳೆ, ಸುನೀಲ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಪುತ್ತೂರು ತಹಶೀಲ್ದಾರ್ ಕುಡಲಗಿ ಪರಾರಿಯಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ವಿಚಾರಿಸಲು ತಹಸೀಲ್ದಾರ್ ಅವರಿಗೆ ಕರೆ ಮಾಡಿದ್ದು, ಕರೆ ಸ್ವೀಕರಿಸಿಲ್ಲ.

ಪ್ರಕರಣದ ಹಿನ್ನೆಲೆ

ದೂರುದಾರರ ಚಿಕ್ಕಪ್ಪನವರಿಗೆ ಸೇರಿದ 65 ಸೆಂಟ್ಸ್ ಜಮೀನು ಅಕ್ರಮ ಸಕ್ರಮದನ್ವಯ ಮಂಜೂರಾಗಿದ್ದು, ನಂತರ ಅವರು ವೀಲುನಾಮೆ ಮೂಲಕ ದೂರುದಾರರಿಗೆ ಹಕ್ಕು ಬರೆಸಿಕೊಟ್ಟಿದ್ದರು.

ಜಾಗವನ್ನು ಪರಭಾರೆ ಮಾಡಲು ತಹಶೀಲ್ದಾರ್ ನಿರಾಕ್ಷೇಪಣಾ ಪತ್ರ ಅವಶ್ಯಕವಾಗಿದ್ದರಿಂದ, 2024ರ ಡಿಸೆಂಬರ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು.

ಅರ್ಜಿ ಬಾಕಿ ಇರುವುದರಿಂದ ವಿಚಾರಿಸಿದಾಗ, ಕೇಸ್ ವರ್ಕರ್ (ಎಫ್.ಡಿ.ಎ) ಸುನೀಲ್ ತಹಶೀಲ್ದಾರರ ಸಹಿಗೆ ಲಂಚ ಅವಶ್ಯಕ ಎಂದು ಹೇಳಿ ಹಣ ಬೇಡಿಕೆ ಇಟ್ಟಿದ್ದರು ಎಂದು ದೂರಲಾಗಿದೆ.

ಲೋಕಾಯುಕ್ತ ಬಲೆ

ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ, ಸೂಚನೆಯಂತೆ ದಾಳಿ ನಡೆಸಿ ಸುನೀಲ್ ₹12,000 ಲಂಚ ಸ್ವೀಕರಿಸುವ ವೇಳೆ ಬಲೆಗೆ ಬಿದ್ದರು. ತಹಶೀಲ್ದಾರ್ ಕುಡಲಗಿ ವಿರುದ್ಧವೂ ಪ್ರಕರಣ ದಾಖಲಾಗಿದ್ದು, ಅವರ ಪಾತ್ರದ ಕುರಿತು ತನಿಖೆ ನಡೆಯಲಿದೆ.

ಕಾರ್ಯಾಚರಣೆಯ ತಂಡದಲ್ಲಿ ಲೋಕಾಯುಕ್ತ ಎಸ್ಪಿ (ಪ್ರಭಾರ) ಕುಮಾರ್ ಚಂದ್ರ ಅವರ ನೇತೃತ್ವದಲ್ಲಿ, ಡಿವೈಎಸ್ಪಿ ಡಾ. ಗಾನ.ಪಿ. ಕುಮಾರ್, ಇನ್ಸ್‌ಪೆಕ್ಟರ್‌ಗಳು ಭಾರತಿ, ಚಂದ್ರಶೇಖರ್ ಕೆ.ಎನ್, ರವಿ ಪವರ್ ಹಾಗೂ ಸಿಬ್ಬಂದಿ ಮಹೇಶ್, ರಾಜಪ್ಪ, ರಾಧಾಕೃಷ್ಣ, ಅದರ್ಶ, ವಿವೇಕ್, ವಿನಾಯಕ, ಪ್ರವೀಣ್, ಗಂಗಣ್ಣ, ನಾಗಪ್ಪ, ಮಾಹದೇವ, ಪವಿತ್ರ, ದುಂಡಪ್ಪ, ರುದ್ರಗೌಡ, ರಾಜಶೇಖರ್ ಸೇರಿ ದಾಳಿ ನಡೆಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪೆರ್ನಾಜೆ ಬಳಿ ಬಸ್ – ಕಾರು ಅಪಘಾತ! ರಸ್ತೆಯಲ್ಲಿ ಚೆಲ್ಲಿದ್ದ ತೈಲಕ್ಕೆ ಜಾರಿದ ಕೆವಿಜಿ ನಿವೃತ್ತ ಪ್ರಾಂಶುಪಾಲರಿದ್ದ ಕಾರು!!

ಪುತ್ತೂರು: ಸುಳ್ಯದಿಂದ ಪುತ್ತೂರಿಗೆ ಆಗಮಿಸುತ್ತಿದ್ದ ಕಾರು ಹಾಗೂ ಮೈಸೂರು ಕಡೆ ತೆರಳುತ್ತಿದ್ದ…